ಬೆಂಗಳೂರು: ಬಿಬಿಎಂಪಿಯ ಮಹದೇವಪುರ ವಲಯದ ಮಾರತ ಹಳ್ಳಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಯನ್ನು ಸ್ಥಳಾಂತರಿಸಲಾಗಿದೆ.
ಮಾರತಹಳ್ಳಿ ಉಪವಿಭಾಗ ಕೃಷ್ಣಶೈನ್ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಬೆಳ್ಳಂದೂರು ವಾರ್ಡಿನ ಬೆಳ್ಳಂದೂರು ಮುಖ್ಯರಸ್ತೆಯಲ್ಲಿರುವ ಬಿಬಿಎಂಪಿ ಕಟ್ಟಡ 1ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಎಲ್. ಮಾರ್ಕಂಡಯ್ಯ ಅವರು ತಿಳಿಸಿದ್ದಾರೆ.