ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ; ಹೋಟೆಲ್, ರಿಲಯನ್ಸ್ ಫ್ರೆಶ್ ಮಾರ್ಟ್‌ಗೆ ಬೀಗ

ಕೋವಿಡ್‌ ನಿಯಂತ್ರಣ ನಿಯಮ ಉಲ್ಲಂಘನೆ
Last Updated 6 ಏಪ್ರಿಲ್ 2021, 13:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಮುದ್ದಿನ ಪಾಳ್ಯದ ಡಿ. ಗ್ರೂಪ್‌ ಬಡಾವಣೆಯ ರಿಲಯನ್ಸ್ ಫ್ರೆಶ್ ಮಾರ್ಟ್ ಹಾಗೂ ಉಡುಪಿ ಕೈರುಚಿ ಹೋಟೆಲ್‌ಗಳನ್ನು ಕೋವಿಡ್‌ ನಿಯಂತ್ರಣ ನಿಯಮಗಳನ್ನು ಪಾಲಿಸದ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಮುಚ್ಚಿಸಿದ್ದಾರೆ.

ರಾಜರಾಜೇಶ್ವರಿ ನಗರ ವಲಯದ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ನೇತೃತ್ವದ ಅಧಿಕಾರಿಗಳ ತಂಡವು ಕೋವಿಡ್‌ ನಿಯಮಗಳ ಪಾಲನೆ ಪರಿಶೀಲನೆ ನಡೆಸುತ್ತಿತ್ತು. ಈ ವೇಳೆ ರಿಲಯನ್ಸ್‌ ಫ್ರೆಶ್‌ ಮಾರ್ಟ್‌ ಹಾಗೂ ‘ಉಡುಪಿ ಕೈರುಚಿ’ ಹೋಟೆಲ್‌ಗಳು ಕೋವಿಡ್ ಸೋಂಕು ಹರಡದಂತೆ ತಡೆಯಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಕಂಡು ಬಂದಿತ್ತು.

‘ರಿಲಯನ್ಸ್‌ ಫ್ರೆಶ್‌ ಮಾರ್ಟ್‌ನಲ್ಲಿ ಹಾಗೂ ಉಡುಪಿ ಕೈರುಚಿ ಹೋಟೆಲ್‌ನಲ್ಲಿ ಯಾರೂ ಮಾಸ್ಕ್ ಧರಿಸಿರಲಿಲ್ಲ. ಸೋಂಕು ನಿವಾರಕ ದ್ರಾವಣದಿಂದ ಕೈತೊಳೆಯುವ ವ್ಯವಸ್ಥೆಯನ್ನೂ ಇಲ್ಲಿ ಕಲ್ಪಿಸಿರಲಿಲ್ಲ. ಗ್ರಾಹಕರ ದೇಹದ ಉಷ್ಣಾಂಶ ತಪಾಸಣೆಗೂ ವ್ಯವಸ್ಥೆ ಮಾಡಿರಲಿಲ್ಲ. ಹಾಗಾಗಿ ಇವುಗಳನ್ನು ಮುಚ್ಚಲಾಗಿದೆ’ ಎಂದು ಆರೋಗ್ಯಾಧಿಕಾರಿ ಡಾ.ಬಾಲಸುಂದರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT