ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜಪೇಟೆ ಈದ್ಗಾ ವಿಷಯದಲ್ಲಿ ಕಾನೂನು ಕ್ರಮಕ್ಕೆ ಸಹಕರಿಸಿ: ಬಿಬಿಎಂಪಿ

Last Updated 29 ಜೂನ್ 2022, 19:37 IST
ಅಕ್ಷರ ಗಾತ್ರ

ಬೆಂಗಳೂರು: ‘ಚಾಮರಾಜಪೇಟೆ ಈದ್ಗಾ ಮೈದಾನದ ವಿಷಯದಲ್ಲಿ ಕಾನೂನಿನ ಪ್ರಕಾರ ಬಿಬಿಎಂಪಿ ಕ್ರಮ ಕೈಗೊಳ್ಳಲಿದ್ದು, ಎಲ್ಲರೂ ಸಹಕರಿಸಬೇಕು’ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

‘ಆಸ್ತಿ ಮಾಲೀಕತ್ವದ ಬಗ್ಗೆ ವಕ್ಫ್ ಮಂಡಳಿ ಈವರೆಗೆ ಹಕ್ಕು ಮಂಡಿಸಿರಲಿಲ್ಲ. ಈಗಲೂ ಮಾಲೀಕತ್ವ ತಮ್ಮದೇ ಎಂಬುದನ್ನು ಅವರು ಸಾಬೀತುಪಡಿಸಬೇಕಾಗುತ್ತದೆ. ಖಾತೆ ಮಾಡಲು ಏನೆಲ್ಲಾ ದಾಖಲೆಗಳು ಬೇಕು ಎಂಬುದನ್ನು ಜಂಟಿ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳು ನಿರ್ಧರಿಸಲಿದ್ದಾರೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸದ್ಯಕ್ಕೆ ಮಾಲೀಕತ್ವ ಯಾರದು ಎಂಬುದನ್ನು ನಿರ್ಧರಿಸಲು ಯಾವುದೇ ದಾಖಲೆಗಳಿಲ್ಲ. ಸೆಂಟ್ರಲ್ ಮುಸ್ಲಿಂ ಕಮಿಟಿ ಆಸ್ತಿ ಎಂಬುದಕ್ಕೂ ದಾಖಲೆಗಳೂ ಇಲ್ಲ. ವರ್ಷಕ್ಕೆ ಎರಡು ದಿನ ಸಾಮೂಹಿಕ ಪ್ರಾರ್ಥನೆಗೆ ಮತ್ತು ಮಕ್ಕಳು ಆಟವಾಡಲು ಅಡಚಣೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸದ್ಯಕ್ಕೆ ಅಷ್ಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT