ಗುರುವಾರ , ಜೂಲೈ 2, 2020
27 °C

ಬೆಂಗಳೂರಲ್ಲಿನ್ನು ಉಗುಳಿದ್ರೆ, ಮಾಸ್ಕ್ ಹಾಕದಿದ್ರೆ ಬೀಳುತ್ತೆ ದುಬಾರಿ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Mask wearing

ಬೆಂಗಳೂರು: ನಗರದಲ್ಲಿನ್ನು ಮಾಸ್ಕ್‌ ಹಾಕದೆ ಓಡಾಡಿದ್ರೆ, ಉಗುಳಿದರೆ ದುಬಾರಿ ದಂಡ ತೆರಬೇಕಾದೀತು. ಕೊರೊನಾ ಸೋಂಕು ಹರಡದಂತೆ ತಡೆಯಲು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿರುವ ಬಿಬಿಎಂಪಿ, ಹೊರಗೆ ಸಂಚರಿಸುವಾಗ ಮುಖಗವಸು ಧರಿಸುವುದನ್ನು ಕಡ್ಡಾಯ ಮಾಡಿದ್ದು, ಈ ನಿಯಮ ಉಲ್ಲಂಘಿಸಿದವರಿಗೆ ₹1,000ದಿಂದ ₹2,000ದವರೆಗೆ ದಂಡ ವಿಧಿಸಲಿದೆ. 

ಈ ನಿಯಮವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ ₹1,000 ಮತ್ತು ಎರಡನೇ ಬಾರಿ ಉಲ್ಲಂಘಿಸಿದರೆ ₹2,000 ದಂಡ ವಿಧಿಸಲಾಗುತ್ತದೆ. ಬಳಸಿದ ಮುಖಗವಸುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ (ನಾಶ) ಮಾಡಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್‌ ಆದೇಶಿಸಿದ್ದಾರೆ. 

‘ಐದು ಅಥವಾ ಅದಕ್ಕಿಂತ ಹೆಚ್ಚು ಜನ ಸೇರಿರುವ ಸಾರ್ವಜನಿಕ ಸ್ಥಳ ಹಾಗೂ ಕಚೇರಿಗಳಲ್ಲಿ ಬಾಯಿ ಮತ್ತು ಮೂಗು ಮುಚ್ಚುವಂತಹ ಮಾಸ್ಕ್‌ ಧರಿಸುವುದು ಕಡ್ಡಾಯ. ಮನೆ ಅಥವಾ ಕಚೇರಿಯಲ್ಲಿ ಯಾರೇ ಬಳಸಿರುವ ಮುಖ ಮತ್ತು ಕೈಗವಸುಗಳನ್ನು ಮುಚ್ಚಿದ ಕವರ್‌ನಲ್ಲಿ ಕಸ ಸಂಗ್ರಹಿಸುವವರಿಗೆ ಕೊಡಬೇಕು’ ಎಂದೂ ಅವರು ತಿಳಿಸಿದ್ದಾರೆ. 

ಎಲ್ಲೆಂದರಲ್ಲಿ ಉಗುಳುವುದು, ಮೂತ್ರ ವಿಸರ್ಜಿಸುವುದ ಚಟುವಟಿಕೆಯನ್ನೂ ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸಲಾಗುತ್ತದೆ. 1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಿಷೇಧಿತ ಕೃತ್ಯ ಎಸಗುವುದನ್ನು ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 188, 269 ಮತ್ತು 270ರ ಅನ್ವಯ ಅಪರಾಧವೆಂದು ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು