ಬೆಂಗಳೂರು: ಗಾಂಧಿನಗರ ವಿಭಾಗದಲ್ಲಿ ಘನತಾಜ್ಯ ಸಂಗ್ರಹಣೆ ಮತ್ತು ಸಾಗಾಣೆಯ ಬಿಲ್ ಪಾವತಿಯಲ್ಲಿ ಕಾನೂನುಬಾಹಿರವಾಗಿ ಎಟಿಆರ್ ಬಿಲ್ ಹ್ಯಾಕ್ ಮಾಡಿ ₹ 2.10 ಕೋಟಿ ಅವ್ಯವಹಾರ ಮಾಡಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ಆಯುಕ್ತ ಸುರಳ್ಕರ್ ವಿಕಾಸ ಕಿಶೋರ್ ಅವರನ್ನು ನೇಮಿಸಲಾಗಿದೆ.

ಅಗತ್ಯ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಿಕೊಂಡು ವಾರದೊಳಗೆ ವಿವರವಾದ ವರದಿ ಸಲ್ಲಿಸುವಂತೆ ಸುರಳ್ಕರ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಮಹಾನಗರ ಪಾಲಿಕೆಯ 27 ವಿಧಾನಸಭಾ ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ಬೆಳಿಗ್ಗೆ ತ್ಯಾಜ್ಯ ವಿಲೇವಾರಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ 3–4 ವರ್ಷಗಳಿಂದ ಅನಧಿಕೃತ ವ್ಯಕ್ತಿಗಳು ಪಶ್ಚಿಮ ವಲಯದ ಹಣಕಾಸು ಶಾಖೆಯ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದಾರೆ. ಕಿರಿಯ ಆರೋಗ್ಯ ಪರೀವೀಕ್ಷಕ ಕೃಷ್ಣ ಅವರು ತ್ಯಾಜ್ಯ ವಿಲೇವಾರಿ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತರದೇ, ಬಿಲ್ ಪಾವತಿಸಿಕೊಳ್ಳುತ್ತಿದ್ದಾರೆ ಎಂದು ವೇಣುಗೋಪಾಲ್ ಮತ್ತು ಎನ್.ಆರ್. ರಮೇಶ್ ದೂರು ಸಲ್ಲಿಸಿದ್ದರು.

ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆಗೆ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.