ಭಾನುವಾರ, ಏಪ್ರಿಲ್ 11, 2021
27 °C
ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಗೆ ಸಲಹೆ ಕೋರಿದ ಬಿಬಿಎಂಪಿ

ಆದಾಯ ಕ್ರೋಡೀಕರಣವೇ ಆದ್ಯತೆಯಾಗಲಿ: ಬಿಬಿಎಂಪಿ ಜನಪ್ರತಿನಿಧಿಗಳು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಆದಾಯ ಕ್ರೋಡೀಕರಣಕ್ಕೆ ಆದ್ಯತೆ ನೀಡುವಂತಹ ಕ್ರಮಗಳನ್ನು ಮುಂದಿನ ಬಜೆಟ್‌ನಲ್ಲಿ ಘೋಷಿಸಬೇಕು ಎಂದು ಬಿಬಿಎಂಪಿ ವ್ಯಾಪ್ತಿಯ ಜನಪ್ರತಿನಿಧಿಗಳು ಸಲಹೆ ನಿಡಿದರು.

2021–22ನೇ ಸಾಲಿನ ಬಜೆಟ್‌ಗೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶಾಸಕರು–ಸಚಿವರ ಸಭೆ ನಡೆಯಿತು. ‘ನಗರದಲ್ಲಿ ಪಾಲಿಕೆಗೆ ಬರುವ ಆದಾಯವನ್ನು ಗಮನದಲ್ಲಿಟ್ಟುಕೊಂಡು, ಆಸ್ತಿ ತೆರಿಗೆಯ ಸೋರಿಕೆ ತಡೆಗಟ್ಟಿ, ಸಮರ್ಪಕವಾಗಿ ತೆರಿಗೆ ಸಂಗ್ರಹಿಸಬೇಕು’ ಎಂದು ಸಲಹೆ ನೀಡಿದರು. 

ಆಡಳಿತಾಧಿಕಾರಿ ಗೌರವ್‌ ಗುಪ್ತ, ‘ಬಿಬಿಎಂಪಿಯು ಸುಮಾರು 800 ಚದರ ಕಿ.ಮೀ ವ್ಯಾಪ್ತಿಯಲ್ಲಿದ್ದು, ನಗರದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸುವುದು ಹಾಗೂ ಸುಸ್ಥಿರ ಆರ್ಥಿಕ ಪರಿಸ್ಥಿಯೊಂದಿಗೆ ಮುನ್ನಡೆಸಲು ಕ್ರಮವಹಿಸಬೇಕಿದೆ. ಹೊಸ ಕಾಯ್ದೆಯನ್ವಯ 243 ವಾರ್ಡ್‌ಗಳಲ್ಲಿ ಇನ್ನೂ ಹೆಚ್ಚು ಪ್ರದೇಶಗಳು ಸೇರ್ಪಡೆಯಾಗಲಿವೆ. ನಾಗರಿಕರಿಗೆ ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸುವುದು ಪಾಲಿಕೆಯ ಜವಾಬ್ದಾರಿ’ ಎಂದರು.

ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ, ಶಾಸಕರಾದ ಆರ್.ಮಂಜುನಾಥ್, ಸುರೇಶ್ ಬಿ.ಎಸ್, ಮುನಿರತ್ನ, ಕೆ.ಜೆ.ಜಾರ್ಜ್, ಅಖಂಡ ಶ್ರೀನಿವಾಸಮೂರ್ತಿ, ರಿಜ್ವಾನ್ ಆರ್ಷದ್, ಎನ್.ಎ. ಹ್ಯಾರಿಸ್, ಉದಯ್ ಬಿ. ಗರುಡಾಚಾರ್, ಸತೀಶ್ ರೆಡ್ಡಿ, ಸೌಮ್ಯಾ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದ ರಾಜು, ಅ.ದೇವೇಗೌಡ ಹಾಗೂ ಪಿ.ಆರ್. ರಮೇಶ್‌, ಎಚ್‌.ಎಂ. ರಮೇಶ್ ಗೌಡ ಸಲಹೆಗಳನ್ನು ನೀಡಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು