ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಿಂದ ಬರುವವರಿಗೆ ಕೋವಿಡ್ ಪರೀಕ್ಷೆ, ಕ್ವಾರಂಟೈನ್ ಕಡ್ಡಾಯ

Last Updated 31 ಆಗಸ್ಟ್ 2021, 23:01 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಕಡ್ಡಾಯವಾಗಿ ಆರ್‌ಟಿ ಪಿಸಿಆರ್‌ ನೆಗೆಟಿವ್‌ ವರದಿ ತಂದಿರಬೇಕು. ಇಲ್ಲದಿದ್ದರೆ, ಸಂಬಂಧಪಟ್ಟ ಕಾಲೇಜು ಅಥವಾ ಕಂಪನಿಗಳು ಅವರನ್ನು 7 ದಿನ ಕ್ವಾರಂಟೈನ್‌ನಲ್ಲಿ ಇರಿಸಿ, ನಂತರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಬಿಬಿಎಂಪಿ ಸೂಚನೆ ನೀಡಿದೆ.

ಕಾಲೇಜುಗಳು ವಸತಿ ನಿಲಯಗಳಲ್ಲಿ ಪ್ರತ್ಯೇಕ ಪ್ರದೇಶವನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಮೀಸಲಿಡಬೇಕು. ಕ್ವಾರಂಟೈನ್‌ನಲ್ಲಿರುವ ವಿದ್ಯಾರ್ಥಿಗಳ ದೈನಂದಿನ ಅವಶ್ಯಕತೆಗಳ ಪೂರೈಕೆಗೂ ಕಾಲೇಜುಗಳು ವ್ಯವಸ್ಥೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿಗಳು, ಕೇರಳದಿಂದ ಬಂದಿದ್ದಲ್ಲಿ ಅಥವಾ ಕಳೆದ 7 ದಿನಗಳಲ್ಲಿ ಕೇರಳಕ್ಕೆ ಭೇಟಿ ನೀಡಿದ್ದಲ್ಲಿ ಅಂತಹ ಉದ್ಯೋಗಿಗಳನ್ನು ಆಯಾ ಸಂಸ್ಥೆಯ ಆಡಳಿತ ಮಂಡಳಿಯವರು ಕ್ವಾರಂಟೈನ್‌ನಲ್ಲಿ ಇಡುವಂತೆ ವ್ಯವಸ್ಥೆ ಮಾಡಬೇಕು ಮತ್ತು ಮಾಹಿತಿಯನ್ನು ಪಾಲಿಕೆಯ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಕಾರ್ಯಕ್ರಮಗಳಿಗೆ ಅವಕಾಶ: ‘ಮದುವೆ ಅಥವಾ ಕೌಟುಂಬಿಕ ಕಾರ್ಯಕ್ರಮಗಳಿಗೆ ಒಳಾಂಗಣದ ಶೇ. 50ರಷ್ಟು ಸಾಮರ್ಥ್ಯದಿಂದ ಗರಿಷ್ಠ 400 ಅತಿಥಿಗಳ ಸಂಖ್ಯೆಗೆ ಮಿತಿಗೊಳಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವ ಷರತ್ತಿನೊಂದಿಗೆ ಅನುಮತಿ ನೀಡಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT