ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ

Last Updated 20 ಮೇ 2021, 17:23 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮಳೆಗಾಲ ಪೂರ್ವ ಸಿದ್ಧತೆಗಳ ಕುರಿತು ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ ಗುರುವಾರ ಪರಿಶೀಲನೆ ನಡೆಸಿದರು.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ರಾಜಕಾಲುವೆ, ನಾಯಂಡಹಳ್ಳಿ ಜಂಕ್ಷನ್ ಹಾಗೂ ದತ್ತಾತ್ರೇಯ ಬಡಾವಣೆ ಸೇರಿದಂತೆ ವಿವಿಧೆಡೆ ಭೇಟಿ ನೀಡಿದರು.

’ರಾಜಕಾಲುವೆಗಳ ಸ್ವಚ್ಛತೆಗೆ ಆದ್ಯತೆ ನೀಡಿ. ಇವುಗಳ ಹೂಳು ತೆಗೆಯಿರಿ‘ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದ ಮಳೆಯಿಂದ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು’ ಎಂದೂ ಹೇಳಿದರು.

ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಸಿದ್ದೇಗೌಡ, ‘ದೇವಸ್ಥಾನದ ಬಳಿ ಎರಡು ಹಾಗೂ ದೇವಸ್ಥಾನದ ಹಿಂಭಾಗದಲ್ಲಿ ಒಂದು ಸೇರಿದಂತೆ ಈ ವ್ಯಾಪ್ತಿಯಲ್ಲಿ ಒಟ್ಟು ಮೂರು ರಾಜಕಾಲುವೆ ಮಾರ್ಗಗಳು ಇವೆ. ಈ ಕಾಲುವೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ’ ಎಂದು ಉತ್ತರಿಸಿದರು.

‘ಪ್ರತಿವರ್ಷ ಮಳೆ ಬಂದ ಸಂದರ್ಭದಲ್ಲಿ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ಬಳಿ ರಾಜಕಾಲುವೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಇತ್ತು. ಈ ಭಾಗದಲ್ಲಿ ನೀರು ಸರಾಗವಾಗಿ ಹರಿದು ಹೋಗಲು, ಪ್ರತ್ಯೇಕ ಬಾಕ್ಸ್‌ಗಳನ್ನು ನಿರ್ಮಿಸಲಾಗಿದೆ. ರಾಜಕಾಲುವೆ ಸುತ್ತಲೂ ತಡೆಗೋಡೆ ನಿರ್ಮಿಸಲಾಗಿದೆ. ಬನಶಂಕರಿಯಿಂದ ವರ್ತುಲ ರಸ್ತೆ ಸಂಪರ್ಕ ಕಲ್ಪಿಸುವ ಮಾರ್ಗದ ಸೇತುವೆ ಎತ್ತರ ಕಡಿಮೆ ಇರುವುದರಿಂದ ಇಲ್ಲಿ ಮಳೆಗಾಲದಲ್ಲಿ ಸಮಸ್ಯೆ ಆಗುತ್ತಿದ್ದು, ಸೇತುವೆ ಎತ್ತರ ಹೆಚ್ಚಿಸಿದರೆ ನಾಯಂಡಹಳ್ಳಿ ಜಂಕ್ಷನ್‍ನಲ್ಲಿ ನೀರು ನಿಲ್ಲುವ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಅವರು ತಿಳಿಸಿದರು.

ಅನಧಿಕೃತ ಕಟ್ಟಡ ತೆರವಿಗೆ ಸೂಚನೆ: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವ್ಯಾಪ್ತಿಯಲ್ಲಿರುವ ಕವಿಕಾ ಕಂಪನಿ ಸಮೀಪದ ರಾಜಕಾಲುವೆ ತಡೆಗೋಡೆಗೆ ಹೊಂದಿಕೊಂಡಂತೆ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಈ ಅನಧಿಕೃತ ಕಟ್ಟಡವನ್ನು ಕೂಡಲೇ ತೆರವು ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಗೌರವ್‌ ಗುಪ್ತ ಸೂಚಿಸಿದರು.

ಅದೇ ರೀತಿ ಜೆ.ಸಿ. ರಸ್ತೆಯ ರಾಜಕಾಲುವೆಯ ಎರಡು ಬದಿಯಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಹಾಗೂ ರಾಜಕಾಲುವೆ ಹೂಳು ತೆಗೆಯುವಂತೆ ಅಧಿಕಾರಿಗಳಿಗೆ ಆಯುಕ್ತರು ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT