ಬೆಂಗಳೂರು: ನಗರದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದವರಲ್ಲಿ ಸೋಂಕು ಪತ್ತೆ ದರ ಶೇ 1ಕ್ಕಿಂತಲೂ ಕಡಿಮೆ ಇದೆ. ಪ್ರತಿನಿತ್ಯ ಸರಿಸುಮಾರು 400 ಪ್ರಕರಣಗಳು ಕಂಡುಬರುತ್ತಿವೆ. ಇವುಗಳಲ್ಲಿ ಹೆಚ್ಚಿನವು ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲೇ ಕಾಣಿಸಿಕೊಳ್ಳುತ್ತಿದ್ದು, ಇದನ್ನು ಬಿಬಿಎಂಪಿ ಗಂಭೀರವಾಗಿ ಪರಿಗಣಿಸಿದೆ.

ಅಪಾರ್ಟ್ಮೆಂಟ್ ಸಮುಚ್ಚಯಗಳ ನಿವಾಸಿಗಳಲ್ಲಿ ಯಾರಿಗಾದರೂ ಸೋಂಕು ಹರಡದಂತೆ ತಡೆಯಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿನಿಧಿಗಳ ಜೊತೆ ವರ್ಚುವಲ್ ರೂಪದಲ್ಲಿ ಬುಧವಾರ ಸಭೆ ನಡೆಸಿದರು.

‘ಪಕ್ಕದ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಮತ್ತೆ ಹೆಚ್ಚಳವಾಗುತ್ತಿದೆ. ಅಲ್ಲಿಂದ ಬರುವ ಪ್ರವಾಸಿಗರ ಮೂಲಕ ನಮ್ಮ ನಗರದಲ್ಲೂ ಕೋವಿಡ್ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಎಲ್ಲಾ ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಮುಖ್ಯ ಆಯುಕ್ತರು ಸೂಚಿಸಿದರು.

‘ಕೋವಿಡ್ ಪ್ರಕರಣಗಳು ಪತ್ತೆಯಾದರೂ ಆತಂಕಕ್ಕೆ ಒಳಗಾಗಬೇಡಿ. ಸೋಂಕು ಇತರರಿಗೆ ಹರಡದಂತೆ ಎಚ್ಚರ ವಹಿಸಬೇಕು. ಕೋವಿಡ್ ಸೋಂಕು ದೃಢಪಟ್ಟವರ ಪ್ರತ್ಯೇಕ ವಾಸಕ್ಕೆ ಕ್ರಮಕೈಗೊಳ್ಳಬೇಕು. ಅವರ ಜೊತೆಗೆ ನೇರ ಹಾಗೂ ಪರೋಕ್ಷವಾಗಿ ಸಂಪರ್ಕಕ್ಕೆ ಬಂದವರು ಹಾಗೂ ಅವರ ಮನೆಯ ಅಕ್ಕ-ಪಕ್ಕದ ಮನೆಯವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ನೋಡಿಕೊಳ್ಳಿ. ಪರೀಕ್ಷೆ ಫಲಿತಾಂಶ ಬರುವವರೆಗೂ ಅವರು ಕೂಡಾ ಪ್ರತ್ಯೇಕವಾಸದಲ್ಲಿರಲಿ’ ಎಂದು ಅವರು ಸಲಹೆ ನೀಡಿದರು.

‘ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಔತಣಕೂಟ ಮತ್ತಿತರ ಸಮಾರಂಭಗಳನ್ನು ನಡೆಸದಿದ್ದರೆ ಒಳ್ಳೆಯದು. ಒಂದು ವೇಳೆ ನಡೆಸುವುದಾದರೂ ಅಂತಹ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಉಲ್ಲಂಘನೆ ಆಗದಂತೆ ಆರ್ಡಬ್ಲ್ಯುಎಗಳು ಕ್ರಮಕೈಗೊಳ್ಳಬೇಕು. ತೀರಾ ಅನಿವಾರ್ಯವಾದರೆ ಮಾತ್ರ ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು. ನಿಗದಿತ ಮಿತಿಗಿಂತ ಹೆಚ್ಚು ಮಂದಿ ಭಾಗವಹಿಸಲು ಅವಕಾಶ ಕಲ್ಪಿಸಬಾರದು. ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವ ಬಗ್ಗೆ ಅಸಡ್ಡೆ ವಹಿಸಬಾರದು. ಎಲ್ಲರೂ ಬಳಸುವ ಸಾಮಾನ್ಯ ಜಾಗಗಳಲ್ಲಿ, ವ್ಯಾಯಾಮ ಕೇಂದ್ರಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ವಿಶೇಷ ಆಯುಕ್ತ (ಆರೋಗ್ಯ) ಡಿ. ರಂದೀಪ್, ‘ಆರ್ಡಬ್ಲ್ಯುಎಗಳು ಅಪಾರ್ಟ್ಮೆಂಟ್ ಸಮುಚ್ಚಯಗಳ ನಿವಾಸಿಗಳ ನಡುವೆ ಸಮನ್ವಯ ಕಾಪಾಡಬೇಕು. ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಅವರು ಕಿವಿಮಾತು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.