ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ 1,705 ಕಿ.ಮೀ. ವಾರ್ಡ್ ರಸ್ತೆ ಹಾಗೂ 477 ಕಿ.ಮೀ. ಮುಖ್ಯರಸ್ತೆಗಳು ಡಾಂಬರು ಕಾಣಲಿದ್ದು, ಇದಕ್ಕಾಗಿ ₹3,142 ಕೋಟಿ ವೆಚ್ಚ ಮಾಡಲಾಗುತ್ತಿದೆ.

ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ರಸ್ತೆ ಮರುಮೇಲ್ಮೈ ಅಭಿವೃದ್ಧಿ ನಡೆಯುತ್ತಿದ್ದು, ಮಳೆಗಾಲಕ್ಕೆ ಮುನ್ನ ಎಲ್ಲ ಕಾಮಗಾರಿಯನ್ನು ಮುಗಿಸುವ ಗುರಿಯನ್ನು ಬಿಬಿಎಂಪಿ ಹೊಂದಿದೆ. ಈ ರಸ್ತೆ ಕಾಮಗಾರಿಗಳಿಗೆ ಮುಖ್ಯಮಂತ್ರಿಯವರ ನವ ನಗರೋತ್ಥಾನ ಯೋಜನೆಯಲ್ಲಿ ಹಣ ಒದಗಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ‘ಈ ರಸ್ತೆಗಳ ದೋಷ ಹೊಣೆಗಾರಿಕೆ ಅವಧಿ ಒಂದು ವರ್ಷದಿಂದ ಮೂರು ವರ್ಷಗಳವರೆಗಿದೆ. ನಿವಾಸಿಗಳ ಗುಂಪು, ಬೆಂಗಳೂರು ನವನಿರ್ಮಾಣ ಪಾರ್ಟಿ (ಬಿಎನ್ಪಿ) ಅವರು ಈ ಅವಧಿಯನ್ನು ಕನಿಷ್ಠ ಐದು ವರ್ಷ ನಿಗದಿಪಡಿಸಬೇಕೆಂದು ಆಗ್ರಹಿಸಿದ್ದಾರೆ. ಇದರಿಂದ ಕಾಮಗಾರಿ ದೀರ್ಘ ಅವಧಿ ಸುಸ್ಥಿತಿಯಲ್ಲಿರುತ್ತದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. 28 ವಿಧಾನಸಭೆ ಕ್ಷೇತ್ರಗಳ ವಾರ್ಡ್ ರಸ್ತೆಗಳಿಗೆ ವೆಚ್ಚ;₹2,501 ಕೋಟಿಯಷ್ಟಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.