ಬೆಂಗಳೂರು: ಬಿಬಿಎಂಪಿ ಶಾಲಾ–ಕಾಲೇಜುಗಳಲ್ಲಿ 2025–26ನೇ ಸಾಲಿನಲ್ಲಿ ನಿಯೋಜಿಸಿಕೊಂಡಿರುವ 804 ಅತಿಥಿ ಶಿಕ್ಷಕರು/ ಉಪನ್ಯಾಸಕರಲ್ಲಿ 35 ಮಂದಿಗೆ ನಿಗದಿತ ವಿದ್ಯಾರ್ಹತೆ ಇಲ್ಲದ್ದರಿಂದ, ಅವರ ನಿಯೋಜನೆಯನ್ನು ರದ್ದುಗೊಳಿಸಲಾಗಿದೆ.

2025–26ನೇ ಸಾಲಿಗೆ ಬಿಬಿಎಂಪಿ ಪ್ರಾಥಮಿಕ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಮೂಲಕ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಲಾಗಿತ್ತು. ಇವರ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲಿಸಿದಾಗ, ಅರ್ಹತೆ ಇಲ್ಲದಿರುವುದು ಕಂಡುಬಂದಿದೆ.

‘35 ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ನಿಗದಿತ ವಿದ್ಯಾರ್ಹತೆ ಹೊಂದಿಲ್ಲ. ಅವರ ನಿಯೋಜನೆಯನ್ನು ರದ್ದುಗೊಳಿಸಲಾಗಿದೆ’ ಎಂದು ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಬಿಬಿಎಂಪಿಯ ಶಿಕ್ಷಣ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

‘2025ರ ಮೇ 24ರಂದು ಮುಖ್ಯ ಆಯುಕ್ತರ ಆದೇಶದಂತೆ, ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ದಾಖಲೆಗಳನ್ನು ಕೇಂದ್ರ ಕಚೇರಿಯ ಪರಿಶೀಲನಾ ಸಮಿತಿ ಪರಿಶೀಲಿಸಿದೆ. ನಿಗದಿತ ವಿದ್ಯಾರ್ಹತೆ ಇಲ್ಲದಿದ್ದರೆ ಅವರ ನಿಯೋಜನೆಯನ್ನು ರದ್ದುಗೊಳಿಸಬೇಕು ಎಂದು 2025ರ ಜುಲೈ 10ರ ಪರಿಷ್ಕೃತ ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಬಿಎಂಪಿ ಪ್ರಾಥಮಿಕ ಶಾಲೆಗಳಿಗೆ ನಿಯೋಜನೆಯಾಗಿರುವ ಅತಿಥಿ ಶಿಕ್ಷಕರಲ್ಲಿ ಡಿ.ಡಿ, ಡಿಸಿಎಚ್ ತರಬೇತಿಯನ್ನು ಪಡೆಯದವರ ನಿಯೋಜನೆಯನ್ನು ರದ್ದುಗೊಳಿಸಲಾಗಿದೆ. ಪದವಿ ಪೂರ್ವ ಕಾಲೇಜುಗಳಿಗೆ ನಿಯೋಜನೆಯಾಗಿರುವ ಅತಿಥಿ ಉಪನ್ಯಾಸಕರಲ್ಲಿ ಬಿ.ಇಡಿ ಪದವಿ ಹೊಂದಿಲ್ಲದವರ ನಿಯೋಜನೆ ರದ್ದುಗೊಳಿಸಿ ಆದೇಶಿಸಲಾಗಿದೆ.

35 ಅತಿಥಿ ಶಿಕ್ಷಕರು/ ಉಪನ್ಯಾಸಕರ ನಿಯೋಜನೆ ರದ್ದುಗೊಳಿಸಿ, ಅವರ ಗೌರವಧನವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ನಿಗದಿತ ವಿದ್ಯಾರ್ಹತೆ ಹೊಂದಿರುವ 732 ಅತಿಥಿ ಶಿಕ್ಷಕರು/ ಉಪನ್ಯಾಸಕರ ಗೌರವ ಧನವನ್ನು ಎಸ್ಡಿಎಂಸಿ ಮತ್ತು ಸಿಡಿಸಿ ಮುಖ್ಯಸ್ಥರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.