ಮಂಗಳವಾರ, ಜೂನ್ 2, 2020
27 °C

ವಿನಾಯಕನಗರದಲ್ಲಿ ಸೀಲ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಬಿಎಂಪಿ 136ನೇ ವಾರ್ಡ್‌ನ ವಿನಾಯಕನಗರದ ವ್ಯಕ್ತಿಯೊಬ್ಬರಲ್ಲಿ ಕೋವಿಡ್–19 ದೃಢಪಟ್ಟಿರುವ ಕಾರಣ ಈ ಬಡಾವಣೆಯ 2ನೇ ಕ್ರಾಸ್‌ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಸೋಂಕಿತ ವ್ಯಕ್ತಿಯ ಜತೆ 8 ಜನರನ್ನು ಪ್ರಾಥಮಿಕ ಸಂಪರ್ಕ, 6 ಮಂದಿಯನ್ನು ದ್ವಿತೀಯ ಸಂಪರ್ಕಿತರು ಎಂದು ಗುರುತಿಸಲಾಗಿದೆ.

ಈ ಮನೆಯ ಮಾಲೀಕರ ಕುಟುಂಬವನ್ನು ದ್ವಿತೀಯ ಸಂಪರ್ಕಿತರು ಎಂದು ಪರಿಗಣಿಸಿ ಕ್ವಾರಂಟೈನ್ ಮಾಡಲಾಗಿದೆ. ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್, ಸೀಲ್‌ಡೌನ್ ಪ್ರದೇಶದಲ್ಲಿ ಸಂಚಾರ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪಾದರಾಯನಪುರದಲ್ಲಿ ಈವರೆಗೆ 430 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಅವರಲ್ಲಿ 190 ಮಂದಿಯ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿ ಬರಬೇಕಿದೆ’ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು