ಶನಿವಾರ, ಡಿಸೆಂಬರ್ 14, 2019
20 °C

ಬಿಬಿಎಂಪಿ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ಸ್ಥಾಯಿ ಸಮಿತಿಗಳಿಗೆ ಇಂದು ನಿಗದಿಯಾಗಿದ್ದ ಚುನಾವಣೆಯನ್ನು ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಮುಂದೂಡಲಾಯಿತು.

ಪುರಭವನದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗಿತ್ತು. ಬೆಳಿಗ್ಗೆ 8ರಿಂದ 9.30ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು.

ಮೇಯರ್, ಉಪಮೇಯರ್ ಸೇರಿ ಬೆರಳೆಣಿಕೆಯಷ್ಟು ಸದಸ್ಯರು ಬಂದು ವಾಪಸ್ ಹೋದರು. ಯಾರೊಬ್ಬರೂ ನಾಮಪತ್ರ ಸಲ್ಲಿಸಲಿಲ್ಲ. ಪ್ರಾದೇಶಿಕ ಆಯುಕ್ತರು ಹರ್ಷಗುಪ್ತ  ಚುನಾವಣೆ ಮುಂದೂಡಲಾಗಿದೆ ಎಂದು ಘೋಷಣೆ ಮಾಡಿದರು.

ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಕಾರಣ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡುವಂತೆ ಮೂರು‌ ಪಕ್ಷಗಳ ಪ್ರತಿನಿಧಿಗಳು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಮನವಿ ತಿರಸ್ಕರಿಸಿ ಚುನಾವಣೆ ಪ್ರಕ್ರಿಯೆ ಆರಂಭಿಸಲಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು