ಮಂಗಳವಾರ, ಜನವರಿ 28, 2020
29 °C

ಪಾಲಿಕೆ: 18ಕ್ಕೆ ಸ್ಥಾಯಿ ಸಮಿತಿ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ ಸಲುವಾಗಿ ಇದೇ 18ರಂದು ಬೆಳಿಗ್ಗೆ 11.30ಕ್ಕೆ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ‍‍ಪ್ರಾದೇಶಿಕ ಆಯುಕ್ತ (‍ಪ್ರಭಾರ) ತುಷಾರ್ ಗಿರಿನಾಥ್‌ ತಿಳಿಸಿದ್ದಾರೆ.

ಡಿ.4ರಂದು ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಅಂದು ಕೋರಂ ಇಲ್ಲದ ಕಾರಣಕ್ಕೆ ಚುನಾವಣೆಯನ್ನು ಮುಂದೂಡಲಾಗಿತ್ತು. ಬಳಿಕ ಡಿ.30ರಂದು ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಪಾಲಿಕೆ ಸದಸ್ಯರು ಹಾಜರಾಗದ ಕಾರಣ ಸಭೆಯನ್ನು ಮತ್ತೆ ಮುಂದೂಡಲಾಗಿತ್ತು.

ಮೇಯರ್‌ ಆಯ್ಕೆ ನಡೆಯುವ ಚುನಾವಣೆಯ ದಿನವೇ ಸ್ಥಾಯಿಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ
ಮಾಡುವುದು ವಾಡಿಕೆ. 2018ರಲ್ಲಿ ಮೇಯರ್‌ ಚುನಾವಣೆಯ ದಿನ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ವಿಚಾರದಲ್ಲಿ ಗೊಂದಲ ಉಂಟಾಗಿತ್ತು. ಹಾಗಾಗಿ, 2018ರ ಡಿ.4ರಂದು ಸ್ಥಾಯಿ ಸಮಿತಿ ಚುನಾವಣೆ ನಡೆಸಲಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು