ಸೋಮವಾರ, ಜೂಲೈ 13, 2020
22 °C
ನಾಗರಿಕ ಸೇವಾ ಕೇಂದ್ರಗಳಲ್ಲಿ ವಲಸೆ ಕಾರ್ಮಿಕರ ಸಹಾಯ ಕೇಂದ್ರ

ವಲಸೆ ಕಾರ್ಮಿಕರು ಊರಿಗೆ ಮರಳಲು ನೋಂದಣಿ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಊರಿಗೆ ಮರಳುವ ವಲಸೆ ಕಾರ್ಮಿಕರು ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಊರಿಗೆ ಮರಳುವ ಕಾರ್ಮಿಕರಿಗೆ ನೆರವಾಗಲು ಬಿಬಿಎಂಪಿ ಎಲ್ಲಾ ನಾಗರೀಕ ಸೇವಾ ಕೇಂದ್ರಗಳಲ್ಲಿ ವಲಸೆ ಕಾರ್ಮಿಕರ ಸಹಾಯ ಕೇಂದ್ರವನ್ನು ತೆರೆದಿದೆ.

‘ನಗರವನ್ನು ತ್ಯಜಿಸುತ್ತಿರುವ ವಲಸೆ ಕಾರ್ಮಿಕರು ಸ್ಥಳೀಯ ಆಡಳಿತಕ್ಕೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಪಾಲಿಕೆಯು ಇಂತಹ ಕಾರ್ಮಿಕರ ಬಗ್ಗೆ ಮಾಹಿತಿ ಕಲೆಹಾಕುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಬಿಬಿಎಂಪಿ ತಿಳಿಸಿದೆ.

ವಲಸೆ ಕಾರ್ಮಿಕರ ಸಹಾಯ ಕೇಂದ್ರಗಳಲ್ಲಿ ಕನ್ನಡದ ಜೊತೆ ಹಿಂದಿ, ಇಂಗ್ಲಿಷ್ ಸಹಿತ ವಿವಿಧ ಭಾಷೆಗಳಲ್ಲಿ ಸೇವೆ ನೀಡಬೇಕು ಎಂದು ಸಹಾಯಕ ಕಂದಾಯ ಅಧಿಕಾರಿಗಳಿಗೆ ಬಿಬಿಎಂಪಿ ಸೂಚಿಸಿದೆ.

ಮತ್ತೆರಡು ವಾರ್ಡ್‌ಗಳಲ್ಲಿ ಕಂಟೈನ್‌ಮೆಂಟ್‌ ಪ್ರದೇಶ
ನಗರದಲ್ಲಿ ಜಯಮಹಲ್‌ ಹಾಗೂ ಚಲವಾದಿಪಾಳ್ಯ ವಾರ್ಡ್‌ಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಈ ವಾರ್ಡ್‌ಗಳಲ್ಲೂ ನಿಯಂತ್ರಿತ (ಕಂಟೈನ್‌ಮೆಂಟ್‌) ಪ್ರದೇಶಗಳನ್ನು ಗುರುತಿಸಲಾಗಿದೆ. ಇದರೊಂದಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಂತ್ರಿತ ಪ್ರದೇಶಗಳ ಸಂಖ್ಯೆ 34ಕ್ಕೆ ಏರಿದೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು