ಬೆಂಗಳೂರು: ಸಮುದಾಯದ ನಾಯಿಗಳು/ ಬೀದಿ ನಾಯಿಗಳನ್ನು ಮಾನವೀಯ ನಿರ್ವಹಣೆಯ ಭಾಗವಾಗಿ, ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ದತ್ತು ಪಡೆದುಕೊಳ್ಳುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಕೋರಿದೆ.

ದತ್ತು ನೀಡಲಾಗುವ ನಾಯಿಗಳ ಆರೋಗ್ಯ ತಪಾಸಣೆ ಮಾಡಿ, ಲಸಿಕೆ ನೀಡಿ, ಸಂತಾನಶಕ್ತಿ ನಿರೋಧಕ ಶಸ್ತ್ರಚಿಕಿತ್ಸೆ ಮಾಡಿರಲಾಗಿರುತ್ತದೆ. ಬೀದಿ ನಾಯಿಗಳ ದತ್ತಕವು ಪ್ರಾಣಿ ಕಲ್ಯಾಣವನ್ನು ಉತ್ತೇಜಿಸುವುದರ ಜೊತೆಗೆ ನಗರದಲ್ಲಿ ಸಹಬಾಳ್ವೆ ಮತ್ತು ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ಸಹಕಾರಿಯಾಗುತ್ತದೆ ಎಂದು ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬೀದಿ ನಾಯಿಗಳನ್ನು ದತ್ತು ಪಡೆಯಲು ಇಚ್ಛಿಸುವವರು ಎನ್.ಆರ್. ಚೌಕದಲ್ಲಿರುವ ನಗರ ಪಾಲಿಕೆಯ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.