ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅನಧಿಕೃತ ಫ್ಲೆಕ್ಸ್‌– ಮೊಕದ್ದಮೆ ದಾಖಲಿಸಿ’- ಮುಖ್ಯ ಆಯುಕ್ತ ಸೂಚನೆ

Last Updated 22 ಫೆಬ್ರುವರಿ 2022, 19:21 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅನಧಿಕೃತ ಬ್ಯಾನರ್, ಪ್ಲೆಕ್ಸ್, ಪೋಸ್ಟರ್‌, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪೊಲೀಸ್ ಠಾಣೆಗೆ ‌ದೂರು ನೀಡಿ ಎಫ್ಐಆರ್ ದಾಖಲಿಸುವಂತೆ ಎಲ್ಲ ವಲಯದ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್‌ ಗುಪ್ತ ಸೂಚನೆ ನೀಡಿದ್ದಾರೆ.

ಪಾಲಿಕೆಯ ಎಲ್ಲ 8 ವಲಯಗಳಲ್ಲಿಯೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್‌, ಫ್ಲೆಕ್ಸ್ , ಪೋಸ್ಟರ್‌, ಬಂಟಿಂಗ್‌ಗಳನ್ನು ತೆರವುಗೊಳಿಸಲು ಮುಖ್ಯ ಎಂಜಿನಿಯರ್‌ಗಳ ನೇತೃತ್ವದ ತಂಡವು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದೆ.

ಬಿಬಿಎಂಪಿ ‘ಹೊರಾಂಗಣ ಸೈನೇಜ್‌ ಮತ್ತು ಸಾರ್ವಜನಿಕ ಸಂದೇಶ ನೀತಿ 2018’ ಅನ್ನು ರೂಪಿಸಲಾಗಿದೆ. ಅದಕ್ಕೆ ಅನುಗುಣವಾಗಿ ಬೈ–ಲಾ ರಚಿಸಲಾಗಿದ್ದು, ಇದು 2020ರ ಏ.1ರಿಂದ ಜಾರಿಗೆ ಬಂದಿದೆ. ಇದರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಪ್ಲೆಕ್ಸ್, ಪೋಸ್ಟರ್‌, ಬಂಟಿಂಗ್‌ಗಳನ್ನು ಅನಧಿಕೃತವಾಗಿ ಅಳವಡಿಸಲು ಅವಕಾಶ ಇಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT