ಸೋಮವಾರ, ಜೂನ್ 27, 2022
24 °C
ಪಶ್ಚಿಮ ವಲಯ: ಒಂದು ಲಕ್ಷ ಲಸಿಕೆ ನೀಡಿದರೆ ಮೊದಲ ಡೋಸ್ ಪೂರ್ಣ

ಮನೆ ಮನೆಗೆ ತೆರಳಿ ಲಸಿಕೆ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಗರದ ಪಶ್ಚಿಮ ವಲಯದಲ್ಲಿ 45 ವರ್ಷ ಮೇಲ್ಪಟ್ಟ ಇನ್ನು ಒಂದು ಲಕ್ಷ ಜನರಿಗೆ ಲಸಿಕೆ ನೀಡಿದರೆ ಮೊದಲ ಡೋಸ್ ಲಸಿಕೆ ಅಭಿಯಾನ ಯಶಸ್ವಿಯಾಗಿ ಮುಗಿಯಲಿದೆ’ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಶುಕ್ರವಾರ ಬಿಬಿಎಂಪಿ ಪಶ್ಚಿಮ ವಲಯದ ಕೋವಿಡ್ ಪರಿಹಾರ ಕ್ರಮಗಳ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಈ ವಯೋಮಿತಿಯ ಶೇ 80ರಷ್ಟು ಜನರಿಗೆ ಲಸಿಕೆ ನೀಡಲಾಗಿದ್ದು, ಇನ್ನು 20ರಷ್ಟು ಜನರಿಗೆ, ಅಂದರೆ 1 ಲಕ್ಷ ನಾಗರಿಕರಿಗಷ್ಟೇ ಕೊಡಬೇಕಿದೆ ಎಂದರು. 

‘ಹಂಚಿಕೆಯಾದ ಲಸಿಕೆಯನ್ನು ಆಯಾ ದಿನವೇ ನೀಡಬೇಕು. ಒಂದು ವೇಳೆ ಆ ಜಾಗದಲ್ಲಿ ಜನ ಬರದಿದ್ದರೆ ಪಕ್ಕದ ಲಸಿಕಾ ಕೇಂದ್ರಕ್ಕೆ ತೆರಳಿ ಕೊಡಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಕೈಕಟ್ಟಿ ಕೂರುವಂತಿಲ್ಲ’ ಎಂದು ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು