ಶುಕ್ರವಾರ, ಡಿಸೆಂಬರ್ 4, 2020
24 °C

ಬಿಬಿಎಂಪಿ: ಮತದಾರರ ಪಟ್ಟಿಯ ಕರಡು ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು ಆಯಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ, ಮತದಾರರ ಸಹಾಯಕ ನೋಂದಣಾಧಿಕಾರಿ ಕಚೇರಿಗಳಲ್ಲಿ ಹಾಗೂ ವಾರ್ಡ್‌ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಕರಡು ಪಟ್ಟಿಯಲ್ಲಿ ತಮ್ಮ ಹಾಗೂ ಕುಟುಂಬದ ಸದಸ್ಯರ ಹೆಸರು ಇದೆಯೇ ಎಂಬುದನ್ನು ಮತದಾರರು ಖಾತರಿಪಡಿಸಿಕೊಳ್ಳಬಹುದು. ತಿದ್ದುಪಡಿಗಳಿದ್ದರೆ ಆಯಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಕಚೇರಿಗೆ ಆಕ್ಷೇಪಣೆಗಳನ್ನು ಡಿ 17ರ ಒಳಗೆ ಸಲ್ಲಿಸಬಹುದು ಎಂದು ಜಿಲ್ಲಾ ಚುನಾಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ನೋಂದಣಾಧಿಕಾರಿ, ಮತದಾರರ ಸಹಾಯಕ ನೋಂದಣಾಧಿಕಾರಿ ಹಾಗೂ ವಾರ್ಡ್‌ ಕಚೇರಿಗಳ ವಿಳಾಸಕ್ಕಾಗಿ ಬಿಬಿಎಂಪಿ ವೆಬ್‌ಸೈಟ್‌ (https://bbmp.gov.in/) ನೋಡಬಹುದು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು