ಶನಿವಾರ, ಏಪ್ರಿಲ್ 4, 2020
19 °C

ಬಿಬಿಎಂಪಿ: ವಾರ್ಡ್‌ ಪುನರ್ ವಿಂಗಡಣೆ ಕರಡು ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಾರ್ಡ್ ಪುನರ್ ವಿಂಗಡಣೆ ಕುರಿತು ಹೊರಡಿಸಿರುವ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿದೆ.

‘ಬಿಬಿಎಂಪಿಗೆ ಸಕಾಲದಲ್ಲಿ ಚುನಾವಣೆ ನಡೆಸುವ ದಿಸೆಯಲ್ಲಿ ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲು ಪಟ್ಟಿ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ‘ಈಗಾಗಲೇ ವಾರ್ಡ್‌ಗಳ ಪುನರ್ ವಿಂಗಡಣೆ ಕುರಿತ ಕರಡು ಅಧಿಸೂಚನೆ ಪ್ರಕಟಿಸಸಲಾಗಿದೆ. ಸಾರ್ವಜನಿಕ ಆಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಲಾಗಿದೆ. ನಂತರ ಅಂತಿಮಗೊಳಿಸಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಾರ್ಡ್‌ವಾರು ಮೀಸಲು ಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಇದಕ್ಕೆ ನ್ಯಾಯಪೀಠ, ‘ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲು ನಿಗದಿಯನ್ನು ಕಾಲಮಿತಿಯಲ್ಲಿ ಮಾಡಬೇಕು. ಏಪ್ರಿಲ್ 1ರೊಳಗೆ ಮೀಸಲು ಪಟ್ಟಿ ನೀಡಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು