ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ: ಕರಡು ಸಲ್ಲಿಕೆ

Last Updated 10 ಜೂನ್ 2022, 6:22 IST
ಅಕ್ಷರ ಗಾತ್ರ

ಬೆಂಗಳೂರು: ಭಾರೀ ಗೋಪ್ಯತೆ ಕಾಪಾಡಿಕೊಂಡು ಸಿದ್ಧಪಡಿಸಿರುವ ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆ ಕರಡು ಕೊನೆಗೂ ಸರ್ಕಾರಕ್ಕೆ ಗುರುವಾರ ಸಲ್ಲಿಕೆಯಾಗಿದೆ.

198 ವಾರ್ಡ್‌ಗಳಿಂದ 243 ವಾರ್ಡ್‌ಗಳಿಗೆ ಏರಿಕೆ ಮಾಡಿ ಸಿದ್ಧಪಡಿಸಿರುವ ಕರಡು ವರದಿಯನ್ನು ನಗರಾಭಿವೃದ್ಧಿ ಇಲಾಖೆಗೆ ಬಿಬಿಎಂಪಿ ಅಧಿಕಾರಿಗಳು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಶೀಲಿಸಿದ ಬಳಿಕ ಸಾರ್ವಜನಿಕ ಆಕ್ಷೇಪಣೆಗೆ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಲಿದೆ. ಶುಕ್ರವಾರ ರಾತ್ರಿ ಅಥವಾ ಶನಿವಾರ ಸಾರ್ವಜನಿಕರಿಗೆ ಈ ಕರಡು ಲಭ್ಯವಾಗುವ ಸಾಧ್ಯತೆ ಇದೆ.

120ಕ್ಕೂ ಹೆಚ್ಚಿನ ವಾರ್ಡ್‌ಗಳ ಗಡಿ ಬದಲಾಗಿದ್ದು, ಕೆಲವು ವಾರ್ಡ್‌ಗಳು ಹಿಂದಿನ ಸ್ವರೂಪವನ್ನೇ ಕಳೆದುಕೊಂಡಿವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT