ಶನಿವಾರ, ಜುಲೈ 2, 2022
22 °C

‘ಬಿಬಿಎಂಪಿ ವಾರ್ಡ್‌ಗಳಿಗೆ ಸಾಧಕರ ಹೆಸರಿಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬಿಬಿಎಂಪಿ ವಾರ್ಡ್‌ಗಳಿಗೆ ಬೆಂಗಳೂರಿನ ಮೂಲ ಗ್ರಾಮಗಳು, ನಾಡಿನ ಸಾಧಕರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ದ್ಯೋತಕಗಳ ಹೆಸರುಗಳನ್ನು ಇಡಬೇಕು’ ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ. ಪ್ರಕಾಶಮೂರ್ತಿ ಆಗ್ರಹಿಸಿದ್ದಾರೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಗ್ಗೆ  ಪತ್ರ ಬರೆದಿರುವ ಅವರು, ‘ಬಿಬಿಎಂಪಿಯಲ್ಲಿ ಹೊಸದಾಗಿ ರಚನೆಯಾಗಿರುವ ಹೆಚ್ಚುವರಿ 45 ವಾರ್ಡ್‌ಗಳು ಸೇರಿದಂತೆ ಒಟ್ಟು 243 ವಾರ್ಡ್‌ಗಳಿಗೆ ಸ್ಥಳೀಯರ ಹೆಸರುಗಳನ್ನು ಇಡಬೇಕು. ಸಾಹಿತಿಗಳು, ಚಿಂತಕರು, ನಾಡಿನ ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ವ್ಯಕ್ತಿಗಳು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಹಾಗೂ ನದಿಗಳ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಮನವಿ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು