ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಬಿ.ಕಾಂ ವಿದ್ಯಾರ್ಥಿ ಸಾವು: ಆತ್ಮಹತ್ಯೆ ಶಂಕೆ

Published 31 ಮೇ 2024, 17:54 IST
Last Updated 31 ಮೇ 2024, 17:54 IST
ಅಕ್ಷರ ಗಾತ್ರ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾಸಿಟಿ ಮಾಲ್‌ನ ನಾಲ್ಕನೇ ಮಹಡಿಯಿಂದ ಜಿಗಿದು ಸುಹಾಸ್ ಅಡಿಗ (21) ಎಂಬುವವರು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

‘ಜೆ.ಪಿ. ನಗರದ ಸುಹಾಸ್ ಅಡಿಗ, ನಗರದ ಕಾಲೇಜೊಂದರಲ್ಲಿ ಬಿ.ಕಾಂ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಕಟ್ಟಡದ ಮಹಡಿಯಿಂದ ಜಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಮೈಕೊ ಲೇಔಟ್ ಠಾಣೆ ಪೊಲೀಸರು ಹೇಳಿದರು.

‘ಕಾಲೇಜಿನಲ್ಲಿ ಇತ್ತೀಚೆಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಸುಹಾಸ್ ಅವರಿಗೆ ಯಾವುದೇ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಅವರು ನೊಂದಿದ್ದರು ಎನ್ನಲಾಗುತ್ತಿದೆ.’

‘ಶುಕ್ರವಾರ ಮಧ್ಯಾಹ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿದ್ದ ಸುಹಾಸ್, ‘ಕ್ಯಾಂಪಸ್ ಸಂದರ್ಶನ ಆಗದಿರುವುದಕ್ಕೆ ಬೇಸರವಾಗಿದೆ’ ಎಂಬುದಾಗಿ ಅಳಲು ತೋಡಿಕೊಂಡಿದ್ದರು. ಸುಹಾಸ್ ಸ್ನೇಹಿತರು, ಕುಟುಂಬಸ್ಥರು ಹಾಗೂ ಇತರರಿಂದ ಹೇಳಿಕೆ ಪಡೆಯಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT