ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿರುವ(ಬಿಸಿಯು) ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ ಸಮಾರಂಭವನ್ನು ಇದೇ 15ರಂದು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಬಿಸಿಯು ಹಾಗೂ ಜಪಾನ್ ಕಾನ್ಸುಲೇಟ್ ಜನರಲ್ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ಜಪಾನ್ನಲ್ಲಿ ಇಂದಿನ ಉದ್ಯೋಗಾವಕಾಶಗಳು’ ಕುರಿತು ವಿಚಾರಸಂಕಿರಣ ನಡೆಯಲಿದೆ. ಹಾಗೆಯೇ, ‘ಕೊಮ್ಮೆ ಡಿನ್ನರ್‘ ಹಾಗೂ ‘ಟೈಮ್ ಸ್ಕೂಪ್ ಹಂಟರ್’ ಎಂಬ ಎರಡು ಜಪಾನಿ ಚಲನಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ಚಲನಚಿತ್ರಗಳ ಪ್ರದರ್ಶನವನ್ನು ಉಚಿತವಾಗಿ ವೀಕ್ಷಿಸಲು ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.