ಗುರುವಾರ , ಜೂನ್ 17, 2021
28 °C

ಅ.1ರಿಂದ ತರಗತಿ: ಬೆಂಗಳೂರು ಕೇಂದ್ರ ವಿವಿ ಸುತ್ತೋಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಅ.1ರಿಂದ ತರಗತಿಗಳನ್ನು ಆರಂಭಿಸುವ ಕುರಿತು ಸುತ್ತೋಲೆ ಹೊರಡಿಸಿದೆ. 

ಆ.13ರಂದು ಈ ಸುತ್ತೋಲೆ ಹೊರಡಿಸಿರುವ ವಿಶ್ವವಿದ್ಯಾಲಯವು, ‘ಸರ್ಕಾರದ ನಿರ್ದೇಶನದಂತೆ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ ಸೆ.1ರಿಂದ 30ರವರೆಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುವುದು. ಅ.1ರಿಂದ ಆಫ್‌ಲೈನ್‌ನಲ್ಲಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಅಥವಾ ರಾಜ್ಯಸರ್ಕಾರದ ನಿರ್ದೇಶನದಂತೆ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಹೇಳಿದೆ. 

ಈ ಕುರಿತು ಪ್ರತಿಕ್ರಿಯೆ ಪಡೆಯಲು ವಿಶ್ವವಿದ್ಯಾಲಯವನ್ನು ಸಂಪರ್ಕಿಸಲಾಯಿತು. ಹಲವರು ಬಾರಿ ಪ್ರಯತ್ನಿಸಿದರೂ ಯಾರೂ ಪ್ರತಿಕ್ರಿಯಿಸಲಿಲ್ಲ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.