ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಡಿಎ: 216 ಬದಲಿ ನಿವೇಶನ ಹಂಚಿಕೆ

Published : 11 ಸೆಪ್ಟೆಂಬರ್ 2024, 23:30 IST
Last Updated : 11 ಸೆಪ್ಟೆಂಬರ್ 2024, 23:30 IST
ಫಾಲೋ ಮಾಡಿ
Comments

ಬೆಂಗಳೂರು: ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ವಂಚಿತರಿಗೆ ಬದಲಿಯಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 216 ನಿವೇಶನಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಂಚಿಕೆ ಮಾಡಿದೆ.

ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಾಗಿದ್ದರೂ ಕಾರಣಾಂತರದಿಂದ ಕೆಲವರಿಗೆ ನಿವೇಶನ  ಸಿಕ್ಕಿರಲಿಲ್ಲ. ಅಂತಹವರಿಗೆ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಸಮ್ಮುಖದಲ್ಲಿ  ಗಣಕೀಕೃತ ಹಂಚಿಕೆ (ಕಂಪ್ಯೂಟರ್‌ ರ‍್ಯಾಂಡಮೈಸೇಷನ್‌) ಮೂಲಕ ಬುಧವಾರ ಬದಲಿ ನಿವೇಶನ ಹಂಚಲಾಯಿತು ಎಂದು ಬಿಡಿಎ ಉಪ ಕಾರ್ಯದರ್ಶಿ ಉಮೇಶ್‌ ತಿಳಿಸಿದರು.

‘ಅರ್ಕಾವತಿ ಬಡಾವಣೆಯಲ್ಲಿ ಹಲವು ಕಾರಣಗಳಿಂದ ನಿವೇಶನ ವಂಚಿತರಾದವರು ಇನ್ನೂ ಒಂದು ಸಾವಿರಕ್ಕೂ ಹೆಚ್ಚು ಜನ ಇದ್ದಾರೆ. ಅವರೂ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಬಯಸಿದರೆ ಹಂಚಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT