ಭಾನುವಾರ, ಜೂನ್ 20, 2021
20 °C

ಬಿಡಿಎ ಮೂವರು ಸಿಬ್ಬಂದಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮೂವರು ಸಿಬ್ಬಂದಿ ಕೊರೋನಾ ಸೋಂಕು ಹೊಂದಿರುವುದು ದೃಢಪಟ್ಟಿದೆ.

‘ಆಯುಕ್ತ ಎಚ್‌.ಆರ್‌.ಮಹದೇವ್ ಅವರ ಆಪ್ತ ಸಹಾಯಕ, ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರು ಸಿಬ್ಬಂದಿ ಕೋವಿಡ್‌ ಹೊಂದಿದ್ದಾರೆ. ಹಾಗಾಗಿ ಕಚೇರಿಗೆ ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ಇಡೀ ಕಚೇರಿಯನ್ನು ಸೀಲ್‌ಡೌನ್‌ ಮಾಡಿಲ್ಲ. ಆಯುಕ್ತರ ಆಪ್ತ ಸಹಾಯಕ ಸಿಬ್ಬಂದಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ಅವರು ಯಾರನ್ನೂ ಭೇಟಿಯಾಗುತ್ತಿಲ್ಲ. ಈ ಮೂವರ ಜೊತೆ ನೇರ ಸಂಪರ್ಕಕ್ಕೆ ಬಂದ ಕೆಲವು ಮನೆಯಲ್ಲೇ ಪ್ರತ್ಯೇಕವಾಸಕ್ಕೊಳಗಾಗಲಿದ್ದಾರೆ’ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು