ಶಿವರಾಮ ಕಾರಂತ ಬಡಾವಣೆ: ಅಂತಿಮ ಅಧಿಸೂಚನೆ ಹೊರಡಿಸಲು ಬಿಡಿಎ ಸಿದ್ಧತೆ

7

ಶಿವರಾಮ ಕಾರಂತ ಬಡಾವಣೆ: ಅಂತಿಮ ಅಧಿಸೂಚನೆ ಹೊರಡಿಸಲು ಬಿಡಿಎ ಸಿದ್ಧತೆ

Published:
Updated:

ಬೆಂಗಳೂರು: ಕೆ.ಶಿವರಾಮ ಕಾರಂತ ಬಡಾವಣೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈ ಬಡಾವಣೆಯ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ.

ಈ ಬಡಾವಣೆ ನಿರ್ಮಾಣಕ್ಕೆ 2008ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು 17 ಗ್ರಾಮಗಳಲ್ಲಿ 3,546 ಎಕರೆ ಭೂಮಿಯನ್ನು ಬಳಸಿಕೊಳ್ಳಲು ಬಿಡಿಎ ನಿರ್ಧರಿಸಿತ್ತು. ಆ ಬಳಿಕ ವಿವಿಧ ಹಂತಗಳಲ್ಲಿ ಒಟ್ಟು 650 ಎಕರೆಗಳನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಿತ್ತು. ಬಳಿಕ ಇದರ ಭೂಸ್ವಾಧೀನ ಪ್ರಕಿಯೆ ಅರ್ಧದಲ್ಲೇ ಸ್ಥಗಿತಗೊಂಡಿತ್ತು.

ಈ ಪ್ರಕರಣದ ಕುರಿತು ಸರ್ಕಾರ ಹಾಗೂ ಬಿಡಿಎಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್‌, ಮೂರು ತಿಂಗಳ ಒಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಹೇಳಿದೆ. ಈ ಬಡಾವಣೆಯ ಹೆಸರಿನಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್‌.ಕೇಶನಾರಾಯಣ ಅವರನ್ನು ನೇಮಿಸಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !