ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು(ಬಿಡಿಎ) ಕಣಿಮಿಣಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಫ್ಲ್ಯಾಟ್ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಫ್ಲ್ಯಾಟ್ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದು, 175 ಮಂದಿ ಫ್ಲ್ಯಾಟ್ ಖರೀದಿಸಿದರು. ಈ ಪೈಕಿ 75 ಮಂದಿ ಫ್ಲ್ಯಾಟ್ನ ಪ್ರಾರಂಭಿಕ ಠೇವಣಿಯನ್ನು ಸ್ಥಳದಲ್ಲಿಯೇ ಪಾವತಿಸಿ, ಹಂಚಿಕೆ ಪತ್ರ ಪಡೆದುಕೊಂಡರು. 25 ಮಂದಿ ಚೆಕ್ ನೀಡಿದ್ದು, ಸೋಮವಾರ ಆರ್.ಟಿ.ಜಿ.ಎಸ್. ಮೂಲಕ ಹಣ ಪಾವತಿಸಿದ ನಂತರ ಹಂಚಿಕೆ ಪತ್ರವನ್ನು ನೀಡಲಾಗುವುದು.

‘ಕಳೆದ ತಿಂಗಳು ಆಯೋಜಿಸಿದ್ದ ಮೇಳದಲ್ಲಿ 200 ಮಂದಿ ಫ್ಲ್ಯಾಟ್ಗಳನ್ನು ಖರೀದಿಸಿದ್ದರು. 2 ಮತ್ತು 3 ಬಿಎಚ್ಕೆ ಫ್ಲ್ಯಾಟ್ ಗಳನ್ನು ಹಂಚಿಕೆ ಮಾಡಲಾಯಿತು. ಫ್ಲ್ಯಾಟ್ಗಳಿರುವ ಸ್ಥಳ ಬೆಂಗಳೂರು–ಮೈಸೂರು ಹೆದ್ದಾರಿಯಿಂದ 1 ಕಿ.ಮೀ. ಮತ್ತು ಚಲ್ಲಘಟ್ಟ ‘ನಮ್ಮ ಮೆಟ್ರೊ’ ನಿಲ್ದಾಣದಿಂದ 3 ಕಿ.ಮೀ.ಗೆ ದೂರವಿದೆ‘ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯನ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ಗಳ ಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದು, ಸಾಲ ಸೌಲಭ್ಯ ಒದಗಿಸಿದರು.

ಪ್ರಾಧಿಕಾರದ ಆರ್ಥಿಕ ಸದಸ್ಯರಾದ ಎ. ಲೋಕೇಶ್, ಮುಖ್ಯ ಲೆಕ್ಕಾಧಿಕಾರಿಯಾದ ಶ್ರೀನಿವಾಸಮೂರ್ತಿ, ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳಾದ ಇಂಬವಳ್ಳಿ, ಶ್ರೀ ಬಸವರೆಡ್ಡಿ ಹಾಗೂ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.