ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅನಧಿಕೃತ ಲೇಔಟ್‌: ಕಟ್ಟಡ ತೆರವು ಆರಂಭ

Published 8 ಜೂನ್ 2024, 23:11 IST
Last Updated 8 ಜೂನ್ 2024, 23:11 IST
ಅಕ್ಷರ ಗಾತ್ರ

ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯವನ್ನು ಬಿಡಿಎ ಆರಂಭಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶ, ಸಮಗ್ರ ಅಭಿವೃದ್ಧಿ ಯೋಜನಾ ಪ್ರದೇಶ (ಸಿಡಿಪಿ), ಶಿವರಾಮ ಕಾರಂತ ಬಡಾವಣೆ ಹಾಗೂ ಬಿಡಿಎ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ನಿರ್ಮಾಣಗಳನ್ನು ತೆರವುಗೊಳಿಸಲಾಗು ತ್ತಿದೆ ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.

ಖಾಸಗಿ ಬಡಾವಣೆ ನಿರ್ಮಾಣಕ್ಕೆ ಬಿಡಿಎಯಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದುಕೊಳ್ಳ ಬೇಕು. ನಂತರ ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನ ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ವಿಷಯವು ಪ್ರಾಧಿಕಾರದ ಗಮನಕ್ಕೆ ಬಂದಿದ್ದು, ಆಯುಕ್ತರ ಆದೇಶದಂತೆ ಜೂನ್‌ 7ರಿಂದ ತೆರವು ಕಾರ್ಯ ಆರಂಭಿಸಲಾಗಿದೆ. ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು ಐದು ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆಯ ನಿರ್ಮಾಣ ಕಾಮಗಾರಿಯನ್ನು ತೆರವು ಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

‌ಅನಧಿಕೃತ ಬಡಾವಣೆ ನಿರ್ಮಾಣ, ನಿವೇಶನಗಳ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊ ಳ್ಳಲಾಗುವುದು ಎಂದು ಬಿಡಿಎ ಎಚ್ಚರಿಸಿದೆ.

279 ಅನಧಿಕೃತ ಬಡಾವಣೆ: ನಗರದಲ್ಲಿ 279 ಅನಧಿಕೃತ ಬಡಾವಣೆಗಳಿರುವುದನ್ನು ಬಿಡಿಎ ಗುರುತಿಸಿದೆ. ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ‍ಪ್ರಕಾರ (ಆರ್‌ಎಂಪಿ–2015), ಭೂ ಉಪಯೋಗದ ಉದ್ದೇಶವನ್ನು ‘ಬಡಾವಣೆ ನಿರ್ಮಾಣ’ ಎಂದು ಪರಿವರ್ತನೆ ಮಾಡಿಸಿಕೊಳ್ಳದೆ ಬೃಹತ್‌ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ನಗರದಲ್ಲಿ 279 ಅನಧಿಕೃತ ಬಡಾವಣೆ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT