ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ: ಶೇ 50ರಷ್ಟು ಶುಲ್ಕ ಕಡಿತಕ್ಕೆ ಶೀಘ್ರ ಅನುಮೋದನೆ

ಬಿಡಿಎ ಬಡಾವಣೆ: ಅಕ್ರಮ ಮನೆಗಳ ಸಕ್ರಮ– ಅಧ್ಯಕ್ಷ ಭರವಸೆ
Last Updated 16 ಮೇ 2022, 19:43 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸಿರುವ ಬಡಾವಣೆಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಮನೆಗಳನ್ನು ಸಕ್ರಮಗೊಳಿಸಲು ವಿಧಿಸುವ ಶುಲ್ಕವನ್ನು ಶೇ 50ರಷ್ಟು ಕಡಿಮೆ ಮಾಡುವ ಪ್ರಸ್ತಾವವನ್ನು ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಬಿಡಿಎ ಭೂಸ್ವಾಧೀನ ನಡೆಸಲಾದ ಪ್ರದೇಶಗಳಲ್ಲಿ 95 ಸಾವಿರ ಮನೆಗಳನ್ನು ಅಗತ್ಯ ಅನುಮತಿ ಪಡೆಯದೆಯೇ ನಿರ್ಮಾಣ ಮಾಡಲಾಗಿದೆ. ಈ ಮನೆಗಳನ್ನು ಮಾಲೀಕರು ಬಿಡಿಎಯಲ್ಲಿ ನೋಂದಣಿ ಮಾಡಿಸಿಕೊಂಡಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಬಿಡಿಎ ಕಾಯ್ದೆಗೆ ತಿದ್ದುಪಡಿ ತಂದು ಸೆಕ್ಷನ್‌ 38ಡಿ ಅಡಿಯಲ್ಲಿ ಈ ಮನೆಗಳನ್ನು ಸಕ್ರಮಗೊಳಿಸಲು ಅನುವು ಮಾಡಿಕೊಟ್ಟಿತ್ತು’ ಎಂದರು.

‘ಈ ಹಿಂದೆ 20x30 ಅಡಿ ವಿಸ್ತೀರ್ಣದ ನಿವೇಶನಕ್ಕೆ ಮಾರ್ಗಸೂಚಿ ದರದ ಶೇ 10ರಷ್ಟು, 30x40 ಅಡಿ ವಿಸ್ತೀರ್ಣದ ನಿವೇಶನಗಳಿಗೆ ಶೇ 20ರಷ್ಟು ಮತ್ತು 50x80 ಅಡಿ ವಿಸ್ತೀರ್ಣದ ನಿವೇಶನಗಳಿಗೆ ಶೇ 50ರಷ್ಟು ಶುಲ್ಕವನ್ನು ಪಾವತಿಸಿ ಸಕ್ರಮ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಈ ಶುಲ್ಕವು ದುಬಾರಿಯಾಗಿದೆ ಎಂದು ದೂರಿದ್ದ ಫಲಾನುಭವಿಗಳು ಅದನ್ನು ಕಡಿಮೆ ಮಾಡುವಂತೆ ಕೋರಿದ್ದರು. ಆ ಪ್ರಕಾರ ಈ ಹಿಂದೆ ನಿಗದಿಪಡಿಸಿದ್ದ ಶುಲ್ಕದ ಪ್ರಮಾಣವನ್ನು ಶೇ 50ರಷ್ಟು ಕಡಿಮೆ ಮಾಡಲು ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ’ ಎಂದರು.

‘ಅಕ್ರಮವಾಗಿ ನಿರ್ಮಾಣವಾದ ಕಟ್ಟಡಗಳನ್ನು ಸಕ್ರಮಗೊಳಿಸಲು ವಿಧಿಸುವ ಶುಲ್ಕದಿಂದ ಬಿಡಿಎಗೆ ಸುಮಾರು ₹ 10 ಸಾವಿರ ಕೋಟಿ ವರಮಾನ ಬರುವ ನಿರೀಕ್ಷೆ ಇದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT