ಬುಧವಾರ, ಜುಲೈ 28, 2021
24 °C
ಪ್ರಾಧಿಕಾರದ ಸಿಬ್ಬಂದಿಗೆ ಕೋವಿಡ್‌ 19 ಸೋಂಕಿತ ವ್ಯಕ್ತಿಯ ಸಂಪರ್ಕ

ಬಿಡಿಎ ಕಚೇರಿಗೆ ಸೋಂಕು ನಿವಾರಕ ಸಿಂಪಡಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಜಾಗೃತ ದಳದ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ಕೋವಿಡ್‌ 19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರಿಂದ ಪ್ರಾಧಿಕಾರದ ಕೇಂದ್ರ ಕಚೇರಿಯನ್ನು ಬುಧವಾರ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಯಿತು.

ಕಾನ್‌ಸ್ಟೆಬಲ್‌ ಅವರನ್ನು ಇತ್ತೀಚೆಗೆ ಕಂಟೈನ್‌ಮೆಂಟ್‌ ಪ್ರದೇಶವಾದ ಪಾದರಾಯನಪುರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಲ್ಲಿ ಅವರ ಜೊತೆ ಕರ್ತವ್ಯ ನಿರ್ವಹಿಸಿದ್ದ ಕಾನ್‌ಸ್ಟೆಬಲ್‌ ಒಬ್ಬರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿತ್ತು.

ಜಾಗೃತ ದಳದ ಕಾನ್‌ಸ್ಟೆಬಲ್‌ ಪಾದರಾಯನಪುರದ ಕರ್ತವ್ಯದಿಂದ ಬಿಡುಗಡೆಗೊಂಡ ಬಳಿಕ ಬಿಡಿಎ ಕೇಂದ್ರ ಕಚೇರಿಯಲ್ಲೂ ಒಂದು ದಿನ ಕೆಲಸಕ್ಕೆ ಹಾಜರಾಗಿದ್ದರು. ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದರಿಂದ ಅವರಿಗೆ ಮನೆಯಲ್ಲೇ ಪ್ರತ್ಯೇಕವಾಸ (ಕ್ವಾರಂಟೈನ್‌) ಅನುಭವಿಸುವಂತೆ ಸೂಚಿಸಲಾಗಿತ್ತು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು