ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ಅಧ್ಯಕ್ಷ ವಿಶ್ವನಾಥ್ ಅನರ್ಹತೆ: ಪಿಐಎಲ್‌ ವಿಲೇವಾರಿ

Last Updated 3 ಸೆಪ್ಟೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಲಾಭದಾಯಕ ಹುದ್ದೆ ಆಕ್ಷೇಪಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂಬ ಕೋರಿಕೆಯನ್ನು ಪರಿಗಣಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಕುರಿತಂತೆ ವಕೀಲ ಎ.ಎಸ್.ಹರೀಶ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ‍ಪ್ರಕಟಿಸಿತು. ‘ಅರ್ಜಿದಾರರ ಮನವಿ ರಾಜ್ಯಪಾಲರ ಪರಿಶೀಲನೆಯಲ್ಲಿದ್ದು, ರಾಜ್ಯಪಾಲರ ಕಚೇರಿಗೆ ನಿರ್ದೇಶನ ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

‘ಬಿಡಿಎ ಅಧ್ಯಕ್ಷ ಹುದ್ದೆಯಲ್ಲಿರುವ ಎಸ್.ಆರ್. ವಿಶ್ವನಾಥ್, ವೇತನ ಮತ್ತು ಭತ್ಯೆ ಪಡೆಯುತ್ತಿದ್ದಾರೆ.ಲಾಭದಾಯಕ ಹುದ್ದೆ ಹೊಂದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಎಸ್.ಆರ್.ವಿಶ್ವನಾಥ್ 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಲಹಂಕ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT