ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ | 378 ಬದಲಿ ನಿವೇಶನ ಹಂಚಿಕೆ

Last Updated 17 ಮಾರ್ಚ್ 2023, 3:24 IST
ಅಕ್ಷರ ಗಾತ್ರ

ಬೆಂಗಳೂರು: ಅರ್ಕಾವತಿ ಬಡಾವಣೆ ನಿವೇಶನದಾರರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನಗಳನ್ನು ಬಿಡಿಎ ಹಂಚಿಕೆ ಮಾಡಿದೆ.

ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ಮಂದಿಗೆ ರ‍್ಯಾಂಡಮೈಸೇಷನ್‌ ಮೂಲಕ ಬದಲಿ ನಿವೇಶನವನ್ನು ವಿತರಿಸಲಾಯಿತು.

ಬಿಡಿಎ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಜಿ.ಕುಮಾರ ನಾಯಕ್ ಸಮ್ಮುಖದಲ್ಲಿ ಸಾರ್ವಜನಿಕರಿಂದಲೇ ರಾಂಡಮೈಸ್ ಪ್ರಕ್ರಿಯೆ ಯನ್ನು ನಡೆಸಲಾಯಿತು.

20x30 ಅಳತೆಯ 232 ನಿವೇಶನ, 30x40 ಅಳತೆಯ 67, 40X60 ಅಳತೆಯ 34 ಹಾಗೂ 50x80 ಅಳತೆಯ 45 ನಿವೇಶನಗಳನ್ನು ಹಂಚಲಾಯಿತು.

ಎರಡು ದಶಕಗಳ ಹಿಂದೆ ಅರ್ಕಾವತಿ ಬಡಾವಣೆಯಲ್ಲಿ ಸಾವಿರಾರು ನಾಗರಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಬಹುತೇಕ ಎಲ್ಲಾ ಹಂಚಿಕೆದಾರರಿಗೆ ನೋಂದಣಿಯನ್ನೂ ಮಾಡಿಕೊಡಲಾಗಿತ್ತು. ಆದರೆ, ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ನಾನಾ ಕಾರಣಗಳಿಂದ 2 ಸಾವಿರಕ್ಕೂ ಹೆಚ್ಚು ಹಂಚಿಕೆದಾರರು ನಿವೇಶನವನ್ನು ಕಳೆದುಕೊಂಡಿದ್ದರು.

‘ನಿವೇಶನ ಹಂಚಿಕೆದಾರರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಕಳೆದ ವರ್ಷ ಸುಮಾರು 300 ನಿವೇಶನದಾರರಿಗೆ ಅರ್ಕಾವತಿಯಲ್ಲಿಯೇ ರಾಂಡಮೈಸ್ ಮೂಲಕ ನಿವೇಶನ ಹಂಚಿಕೆ ಮಾಡಲಾಗಿತ್ತು. ಆದರೆ, ಉಳಿದ ನಿವೇಶನ ಹಂಚಿಕೆರರಿಗೆ ಅರ್ಕಾವತಿಯಲ್ಲಿ ಬದಲಿ ನಿವೇಶನವನ್ನು ಗುರುತಿಸಿ ಹಂಚಿಕೆ ಮಾಡುವುದು ಕಷ್ಟವಾಗಿತ್ತು’ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹೇಳಿದರು.

‘ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಪಡೆಯಲು ಆಸಕ್ತಿ ಇರುವ ಹಂಚಿಕೆದಾರರಿಗೆ ಒಂದು ಅವಕಾಶವನ್ನು ನೀಡಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದ ಬಹುತೇಕ ಹಂಚಿಕೆದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ’ ಎಂದರು.

ಸದ್ಯದ ಪರಿಸ್ಥಿತಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಬದಲಿ ನಿವೇಶನಗಳು ಲಭ್ಯವಾಗುವುದು ತಡವಾಗುತ್ತದೆ. ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಬಯಸಿ ಅರ್ಜಿ ಸಲ್ಲಿಸಿದರೆ ಅವರಿಗೆ ನಿವೇಶನವನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ಆಯುಕ್ತ ಕುಮಾರ ನಾಯಕ್ ಮಾತನಾಡಿ, ‘ನಾನಾ ಕಾರಣಗಳಿಂದ ಅರ್ಕಾವತಿ ನಿವೇಶನ ಹಂಚಿಕೆದಾರರಿಗೆ ನಿವೇಶನವನ್ನು ನೀಡಲು ಸಾಧ್ಯವಾಗಿಲ್ಲ. ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಬಯಸಿ ಅರ್ಜಿಸಲ್ಲಿಸಿದವರಿಗೆ ಪಾರದರ್ಶಕವಾಗಿ ಸಾರ್ವಜನಿಕರ ಸಮ್ಮುಖದಲ್ಲಿಯೇ ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದರು.

ಬಿಡಿಎ ಕಾರ್ಯದರ್ಶಿ ಡಾ.ಶಾಂತರಾಜು, ಎಂಜಿನಿಯರ್‌ ಸದಸ್ಯ ಶಾಂತರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT