ಬಿಡಿಎ: ಸಕಾಲ ಸಪ್ತಾಹ
ಬೆಂಗಳೂರು: ಸರ್ಕಾರಿ ಸೇವೆಗಳನ್ನು ಕಾಲಮಿತಿಯೊಳಗೆ ಒದಗಿಸುವ ಸಲುವಾಗಿ ಜಾರಿಗೆ ತಂದಿರುವ ‘ಸಕಾಲ' ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ‘ಸಕಾಲ ಸಪ್ತಾಹ’ ಹಮ್ಮಿಕೊಂಡಿದೆ.
ಸಪ್ತಾಹದ ಅವಧಿಯಲ್ಲಿ ಹೊಸತಾಗಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುತ್ತದೆ. ಹಳೆಯ ಅರ್ಜಿಗಳ ವಿಲೇವಾರಿಗೂ ಕ್ರಮಕೈಗೊಳ್ಳಲಾಗುತ್ತದೆ. ಸಕಾಲ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನೂ ಪ್ರಾಧಿಕಾರ ಹಮ್ಮಿಕೊಳ್ಳಲಿದೆ.
ಪ್ರಾಧಿಕಾರಕ್ಕೆ ಸಂಬಂಧಿಸಿದ 10 ಸೇವೆಗಳು ಈ ಕಾರ್ಯಕ್ರಮದಡಿ ಲಭ್ಯ. ಹೆಚ್ಚಿನ ಮಾಹಿತಿಗೆ ಬಿಡಿಎ ವೆಬ್ಸೈಟ್ (www.bdabangalore.org) ಅಥವಾ ಸಕಾಲ ವೆಬ್ಸೈಟ್ (www.sakala.kar.nic.in) ನೋಡಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.