ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

Last Updated 7 ಜೂನ್ 2022, 20:15 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ತೆರವುಗೊಳಿಸಿ, ₹20 ಕೋಟಿ ಮೌಲ್ಯದ ಆಸ್ತಿಯನ್ನು ಬಿಡಿಎ ವಶಕ್ಕೆ ಪಡೆದಿದೆ.

‘ಇಂದಿರಾನಗರ 2ನೇ ಹಂತದಲ್ಲಿನ ಬಿನ್ನಮಂಗಲ ಸರ್ವೆ ನಂಬರ್ 13ರಲ್ಲಿ 11 ಗುಂಟೆ ಜಾಗದಲ್ಲಿ ಖಾಸಗಿಯವರು ಮೂರು ಶೆಡ್ ನಿರ್ಮಿಸಿಕೊಂಡಿದ್ದರು. ಸುಮಾರು ₹18 ಕೋಟಿ ಮೌಲ್ಯದ ಆಸ್ತಿ ಇದಾಗಿದ್ದು, ಹಲವು ಬಾರಿ ಮುನ್ನೆಚ್ಚರಿಕೆ ನೀಡಿದ್ದರೂ ಒತ್ತುವರಿದಾರರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಸುಪ್ರೀಂ ಕೋರ್ಟ್‌ ಬಿಡಿಎ ಪರ ತೀರ್ಪು ನೀಡಿತ್ತು. ಮಂಗಳವಾರ ವಿಶೇಷ ಕಾರ್ಯಪಡೆ ಸಿಬ್ಬಂದಿ ಶೆಡ್ ತೆರವುಗೊಳಿಸಿ ಆಸ್ತಿ ವಶಕ್ಕೆ ಪಡೆದರು’ ಎಂದು ಬಿಡಿಎ ತಿಳಿಸಿದೆ.

ಮತ್ತೊಂದು ಪ್ರಕರಣದಲ್ಲಿ ಲೀಲಾ ಪ್ಯಾಲೆಸ್‌ ಹೋಟೆಲ್ ಹಿಂಭಾಗ 1,600 ಚದರಡಿ ಜಾಗದಲ್ಲಿ ಹೋಟೆಲ್‌ನವರು ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದರು. ಅದನ್ನು ತೆರವುಗೊಳಿಸಿ ₹2 ಕೋಟಿ ಮೌಲ್ಯದ ಆಸ್ತಿ ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದೆ.

‘ಬಿಡಿಎ ಆಸ್ತಿ ಒತ್ತುವರಿ ತೆರವುಗೊಳಿಸಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಈ ಜಾಗಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುತ್ತಿದ್ದು, ಇದರಿಂದ ಬಿಡಿಎಗೆ ಹೆಚ್ಚಿನ ವರಮಾನ ಬರುತ್ತಿದೆ’ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT