ಬೆಂಗಳೂರು: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.

ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘18 ಕ್ಷೇತ್ರಗಳ ಪೈಕಿ 15ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಾಸಕ ಸೋಮಶೇಖರ್ ಅವರು ನಮ್ಮ ಜೊತೆ ಕೈಜೋಡಿಸಿದ್ದು, ಅವರ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಬೆಂಗಳೂರು ಉತ್ತರ ಜಿಲ್ಲೆಯ ಹೊಸಕೋಟೆಯ 2, ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರದಲ್ಲಿ 1, ಆನೇಕಲ್ನಲ್ಲಿ 1, ಬೆಂಗಳೂರು ಉತ್ತರದಲ್ಲಿ 1 ಕ್ಷೇತ್ರದಲ್ಲಿ ಹಾಗೂ ಎಚ್.ಎಂ. ರೇವಣ್ಣ ಅವರ ಸಹಕಾರದಿಂದ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಉಳಿದಂತೆ ನೆಲಮಂಗಲ ಹಾಗೂ ಸೋಲೂರುಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ’ ಎಂದು ಮಾಹಿತಿ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ ಹಾಗೂ ಶಾಸಕರಾದ ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೇನ್, ಬಾಲಕೃಷ್ಣ, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್, ಮುಖಂಡರಾದ ಆರ್.ಕೆ. ರಮೇಶ್, ವೆಂಕಟರಮಣಪ್ಪ ಮತ್ತಿತರರ ಸಹಕಾರದಿಂದ ಈ ಗೆಲವು ಸಾಧ್ಯವಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಟ್ಟು 36 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಹೊಂದಿರುವ ಬ್ಯಾಂಕ್ ಇದಾಗಿದೆ. ಬಿಡಿಸಿಸಿ ಬ್ಯಾಂಕ್ ಅನ್ನು ಅತ್ಯುತ್ತಮವಾಗಿ ಮುನ್ನಡೆಸಿ, ರೈತರು ಹಾಗೂ ನಾಗರಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನಮ್ಮ ಆಡಳಿತ ಮಂಡಳಿ ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.