ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಝಿಕಾ ವೈರಾಣು: ಕಟ್ಟೆಚ್ಚರಕ್ಕೆ ಸೂಚನೆ

Last Updated 9 ಜುಲೈ 2021, 22:26 IST
ಅಕ್ಷರ ಗಾತ್ರ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಝಿಕಾ ವೈರಾಣು ಕಾಣಿಸಿಕೊಂಡಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಆಯುಕ್ತ ಡಾ.ಕೆ.ವಿ. ತ್ರಿಲೋಕ್ ಚಂದ್ರ ಅವರು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಅವರು ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ‘ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಚಾಮರಾಜನಗರ ಜಿಲ್ಲೆಯು ಜಾಗರೂಕವಾಗಿ ಇರಬೇಕು. ಈ ವೈರಾಣು ಈಡಿಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಮಳೆಗಾಲದಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಿದೆ. ಈಡಿಸ್ ಸೊಳ್ಳೆಯ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು. ಆಶಾ ಕಾರ್ಯಕರ್ತೆಯರು ಈ ಜ್ವರದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದ್ದಾರೆ.

‘ಸೋಂಕಿಗೆ ಒಳಗಾದವರಿಗೆ ಜ್ವರ, ದದ್ದು, ಕೀಲು ನೋವು ಸೇರಿದಂತೆ ವಿವಿಧ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸೋಂಕು ಶಂಕಿತ ವ್ಯಕ್ತಿಯ ಮಾದರಿಯನ್ನು ಸಂಗ್ರಹಿಸಿ, ಬೆಂಗಳೂರಿನ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಗರ್ಭಿಣಿಯರಲ್ಲಿ ಜ್ವರ ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT