ಶುಕ್ರವಾರ, ಜನವರಿ 22, 2021
28 °C

ಮಹಿಳೆಯರ ರಕ್ಷಣೆಗಾಗಿ ‘ಬಿ.ಸೇಫ್ ಕ್ಷೇತ್ರ’ಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿ-ಪ್ಯಾಕ್ ಹಾಗೂ ಸಿಜಿಐ ಸಂಸ್ಥೆಗಳ ಸಹಯೋಗದಲ್ಲಿ ಮಹದೇವಪುರ ಹಾಗೂ ಶಿವಾಜಿನಗರ ಕ್ಷೇತ್ರಗಳಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಸಬಲೀಕರಣಕ್ಕಾಗಿ ಹಮ್ಮಿಕೊಂಡಿರುವ ‘ಬಿ.ಸೇಫ್ ಕ್ಷೇತ್ರ’ ಕಾರ್ಯಕ್ರಮಕ್ಕೆ ಶಾಸಕರಾದ ಅರವಿಂದ ಲಿಂಬಾವಳಿ ಹಾಗೂ ರಿಜ್ವಾನ್ ಅರ್ಷದ್ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅರವಿಂದ ಲಿಂಬಾವಳಿ, ‘ಸಾರ್ವಜನಿಕ ಸ್ಥಳಗಳು ಹಾಗೂ ಮನೆಯೊಳಗೆ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯಕ. ಈ ಕಾರ್ಯಕ್ರಮ ಮಹಿಳೆಯರಿಗೆ ರಕ್ಷಾಕವಚದಂತೆ ಕಾರ್ಯನಿರ್ವಹಿಸಲಿದೆ’ ಎಂದರು.

‘ಶಿವಾಜಿನಗರ ವ್ಯಾಪ್ತಿಯಲ್ಲಿ ಉದ್ಯೋಗನಿರತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಕಾರ್ಯಕ್ರ
ಮವು ಮಹಿಳೆಯರು ನಿರ್ಭಯವಾಗಿ ಮತ್ತು ಆತ್ಮವಿಶ್ವಾಸದಿಂದ ಓಡಾಡಲು ಸಹಾಯ ಮಾಡಲಿದೆ’ ಎಂದು ರಿಜ್ವಾನ್ ಅರ್ಷದ್ ಹೇಳಿದರು.

‘ಮಾದರಿ ಕ್ಷೇತ್ರದ ಬಗ್ಗೆ ನಾಗರಿಕರ ನಿರೀಕ್ಷೆಗಳು, ಮಹಿಳಾ ಸುರಕ್ಷತೆ ಹಾಗೂ ಸಬಲೀಕರಣ’ ಕುರಿತು ಸಂವಾದದಲ್ಲಿ ಮಾತನಾಡಿದ ಐಪಿಎಸ್ ಅಧಿಕಾರಿ ಇಶಾ ಪಂತ್, ‘ಬೆಂಗಳೂರು ಜಾಗತಿಕ ನಗರ. ಇಲ್ಲಿ ‘ನಿರ್ಭಯಾ’ ಯೋಜನೆಯಡಿ ನಗರದಾದ್ಯಂತ 7,500 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ’ ಎಂದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ‘ಲಾಕ್‍ಡೌನ್ ಅವಧಿಯಲ್ಲಿ ಮಹಿಳೆಯರ ಮೇಲೆ ಕೌಟುಂಬಿಕ
ದೌರ್ಜನ್ಯ ಪ್ರಕರಣಗಳು ಅವ್ಯಾಹತವಾಗಿ ದಾಖಲಾಗಿವೆ. ಮಹಿಳೆಯರು ಆರ್ಥಿಕವಾಗಿ ಸದೃಢ ಹಾಗೂ ಜಾಗೃತರಾಗುವುದು ಅಗತ್ಯ’ ಎಂದರು.

ಸಿಟಿಜನ್ ಫಾರ್ ಬೆಂಗಳೂರು ಸಂಸ್ಥೆಯ ತಾರಾ ಕೃಷ್ಣಸ್ವಾಮಿ, ಬಿಪ್ಯಾಕ್ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ರೇವತಿ ಅಶೋಕ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು