ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಕಾಲೇಜೊಂದರ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲಿನ ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ರಾಹುಲ್ ಅವರು ಬಿ.ಇ ಕಂಪ್ಯೂಟರ್ ಸೈನ್ಸ್‌ನಲ್ಲಿ 5ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಕಾಲೇಜಿನಲ್ಲಿ ಪರೀಕ್ಷೆಯಿತ್ತು. ಬೆಳಿಗ್ಗೆ ಎಂದಿನಂತೆಯೇ ಕಾಲೇಜಿಗೆ ಬಂದಿದ್ದರು. 10 ಗಂಟೆಯ ಸುಮಾರಿಗೆ ಕಾಲೇಜಿನ 6ನೇ ಮಹಡಿಗೆ ತೆರಳಿದ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೋಷಕರು ದೂರು ನೀಡಿದ್ದು ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಮೂಲಗಳು ಹೇಳಿವೆ.

ರಾಹುಲ್ ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಹುಲ್ ತನ್ನ ತಾಯಿಯೊಂದಿಗೆ ನಗರದ ಕೂಡ್ಲುವಿನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಿರುವ ಆರೋಪವಿದೆ. ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದಿದ್ದ ಎನ್ನಲಾಗುತ್ತಿದೆ. ಆದರೆ, ಪೊಲೀಸರು ಈ ಬಗ್ಗೆ ದೃಢಪಡಿಸಿಲ್ಲ.

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.