ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸಿಗೆ ಬ್ಲಾಕಿಂಗ್: ಆಸ್ಪತ್ರೆಯ ಇಬ್ಬರು ನೌಕರರ ಬಂಧನ

Last Updated 10 ಮೇ 2021, 7:36 IST
ಅಕ್ಷರ ಗಾತ್ರ

ಬೆಂಗಳೂರು:ಹಾಸಿಗೆ ಬ್ಲಾಕಿಂಗ್ ದಂಧೆ ಸಂಬಂಧ ನಗರದ ಖಾಸಗಿ ಆಸ್ಪತ್ರೆಗಳ ಇಬ್ಬರು ನೌಕರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

'ಸುಧೀರ್ ಹಾಗೂ ವೆಂಕೊಬರಾವ್ ಬಂಧಿತರು. ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಎದುರು ಹಾಜರುಪಡಿಸಲಾಗುತ್ತಿದೆ. ವಿಚಾರಣೆಗಾಗಿ ಕಸ್ಟಡಿಗೆ ಪಡೆಯಬೇಕಿದೆ' ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

'ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದ ಸೋಂಕಿತರ ಹೆಸರಿನಲ್ಲಿ ಆರೋಪಿಗಳು ಹಾಸಿಗೆ ಬ್ಲಾಕ್ ಮಾಡಿದ್ದರು. ಅವರ ಹೆಸರಿನಲ್ಲಿ ಹಾಸಿಗೆಗಳಲ್ಲಿ ಬೇರೆಯವರನ್ನು ಸೇರಿಸಿಕೊಂಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT