ಮಂಗಳವಾರ, ಮೇ 11, 2021
26 °C

ಹಾಸಿಗೆ, ಔಷಧ ಲಭ್ಯತೆ: ಫಲಕ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಭ್ಯವಿರುವ ಹಾಸಿಗೆಗಳು ಮತ್ತು ಔಷಧದ ಮಾಹಿತಿಯನ್ನು ಖಾಸಗಿ ಆಸ್ಪತ್ರೆಗಳು ಪ್ರದರ್ಶನ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಜೊತೆಗೆ, ಸಹಾಯ ಕೇಂದ್ರ ಸೌಲಭ್ಯವನ್ನೂ  ಒದಗಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಲ್ಲ ಜಿಲ್ಲೆಗಳಲ್ಲಿರುವ ಆರೋಗ್ಯ ಸೇವಾ ಕೇಂದ್ರಗಳು ತಕ್ಷಣ ಈ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ತಿಳಿಸಿದ್ದಾರೆ.

ಕೋವಿಡ್‌ ರೋಗಿಗಳಿಗೆ ಶೇ 50ರಷ್ಟು ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆಗಳು ಮೀಸಲಿಡಬೇಕು. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇನ್ನೂ ಹಾಸಿಗೆ ಮೀಸಲಿರಿಸಿಲ್ಲ. ಹೀಗಾಗಿ, ಬಿಬಿಎಂಪಿಯ ಕೇಂದ್ರೀಕೃತ ಹಂಚಿಕೆ ವ್ಯವಸ್ಥೆ ಮೂಲಕ ಹಾಸಿಗೆ ಹಂಚಿಕೆ ಮಾಡಿದ್ದರೂ ಹಲವು ರೋಗಿಗಳಿಗೆ ಹಾಸಿಗೆ ಸಿಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರ ಈ ಆದೇಶ ಹೊರಡಿಸಿದೆ.

‘ಕೆಪಿಎಂಇ ಕಾಯ್ದೆಯಡಿ ನೋಂದಾಯಿತ ಎಲ್ಲ ಖಾಸಗಿ ಆಸ್ಪತ್ರೆಗಳು ಆಸ್ಪತ್ರೆಯ ಹೆಸರು, ಒಟ್ಟು ಹಾಸಿಗೆಗಳ ಸಂಖ್ಯೆ, ಕೋವಿಡ್ ರೋಗಿಗಳಿಗೆ ಮೀಸಲಿಟ್ಟ ಒಟ್ಟು (ಶೇ 50) ಹಾಸಿಗೆಗಳ ಮಾಹಿತಿಯನ್ನು ಪ್ರದರ್ಶಿಸಬೇಕು. ಜೊತೆಗೆ, ತಮ್ಮಲ್ಲಿ ಲಭ್ಯವಿರುವ ಎಲ್ಲ ಅವಶ್ಯಕ ಔಷಧಗಳ ಮಾಹಿತಿ ಮತ್ತು ಸಹಾಯ ಕೇಂದ್ರದ ವಿವರವನ್ನೂ ನೀಡಬೇಕು. ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು