ಬೆಂಗಳೂರು: ನಗರದಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭವಾಗಿದೆ.
ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಹಾಗೂ ಎಲ್ಲೆಂದರಲ್ಲಿ ವಾಹನ ನಿಲುಗಡೆ ನಿಯಂತ್ರಿಸಲು ವಿಶೇಷ ಆದ್ಯತೆ ಮೇರೆಗೆ ಉಪ್ಪಾರಪೇಟೆ ಸಂಚಾರ ಠಾಣೆ ಪೊಲೀಸರಿಗೆ ಮಾತ್ರ ಟೋಯಿಂಗ್ ಮಾಡಲು ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂಚಾರ ಪೊಲೀಸರು ಆಗಲೇ ಮೆಜಿಸ್ಟಿಕ್ ಸುತ್ತಮುತ್ತ ಕಾರ್ಯಾಚರಣೆ ಆರಂಭಿಸಿದ್ದಾರೆ. ಟೋಯಿಂಗ್ ವಾಹನದಲ್ಲಿ ಒಬ್ಬರು ಎಎಸ್‌ಐ ಹಾಗೂ ಟೋಯಿಂಗ್ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.
ಆರಂಭದಲ್ಲಿ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಗುತ್ತದೆ. ಆದರೂ ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿದರೆ ಟೋಯಿಂಗ್ ಮಾಡಲಾಗುತ್ತದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.