ಶುಕ್ರವಾರ, ಆಗಸ್ಟ್ 7, 2020
23 °C

ಮನೆ ಮನೆ ಸಮೀಕ್ಷೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭವಾಗಿರುವ ಮನೆ–ಮನೆ ಸಮೀಕ್ಷೆ ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಚಾಲನೆ ನೀಡಿದರು.

‘ಕೊರೊನಾ ಸೋಂಕು ನಿಯಂತ್ರಣಕ್ಕೆ ನಾಗರಿಕರನ್ನು ಒಳಗೊಂಡ ಕಾರ್ಯಪಡೆ ರಚಿಸಬೇಕು ಎಂಬ ಸರ್ಕಾರದ ನಿರ್ಧಾರದ ಮೇರೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ’ ಎಂದು ಸುಧಾಕರ್ ಹೇಳಿದರು.

‘ಸ್ವಯಂ ಪ್ರೇರಣೆಯಿಂದ ಕಾರ್ಯಪಡೆಯಲ್ಲಿ ಭಾಗಿಯಾಗಿರುವ ನಾಗರಿಕರು ಬೂತ್ ಮಟ್ಟದಲ್ಲೇ ಸೋಂಕು ನಿಗ್ರಹಕ್ಕೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ರ್‍ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೂ ಸಚಿವರು ಚಾಲನೆ ನೀಡಿದರು. ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.

ರಾಜಾನುಕುಂಟೆ ಗ್ರಾಮದಲ್ಲೂ ಸಮೀಕ್ಷೆ
‌ಹೆಸರಘಟ್ಟ:
ಸಮೀಪದ ರಾಜಾನುಕುಂಟೆ ಗ್ರಾಮದಲ್ಲೂ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಶಾಸಕ ಎಚ್.ಎಸ್. ವಿಶ್ವನಾಥ್ ಚಾಲನೆ ನೀಡಿದರು.

‘15 ಸದಸ್ಯರಿರುವ ಸ್ವಯಂ ಸೇವಕರ ತಂಡವು ಪ್ರತಿ ಮನೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸಲಿದೆ. ಎಲ್ಲಾ ವಿವರಗಳನ್ನು ಪರಿಶೀಲಿಸಿ ಅಗತ್ಯ ಇದ್ದವರಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು