ಗುರುವಾರ , ಏಪ್ರಿಲ್ 15, 2021
22 °C
ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು

ಪದವಿ ತರಗತಿಗಳ ಆರಂಭ: ಎದ್ದು ಕಂಡ ಅತಿಥಿ ಉಪನ್ಯಾಸಕರ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಪದವಿ ಕಾಲೇಜುಗಳಲ್ಲಿ ಎಲ್ಲ ತರಗತಿಗಳು ಶುಕ್ರವಾರದಿಂದ ಪ್ರಾರಂಭವಾದವು. ಖಾಸಗಿ ಕಾಲೇಜುಗಳಲ್ಲಿ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಕಂಡು ಬಂದರೆ, ಸರ್ಕಾರಿ ಕಾಲೇಜುಗಳಲ್ಲಿ ಅಂತರ ಕಾಪಾಡಿಕೊಳ್ಳಲೂ ಸಾಧ್ಯವಾಗದಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

9 ತಿಂಗಳ ನಂತರ ಪದವಿಯ ಪ್ರಥಮ ಮತ್ತು ದ್ವಿತೀಯ ವರ್ಷದ ತರಗತಿಗಳು ಪ್ರಾರಂಭವಾಗಿವೆ. ಶೇ 50 ವಿದ್ಯಾರ್ಥಿಗಳು ಒಂದು ದಿನ, ಉಳಿದ ಶೇ 50ರಷ್ಟು ವಿದ್ಯಾರ್ಥಿಗಳು ಮತ್ತೊಂದು ದಿನ ಬರುವಂತೆ ಸರ್ಕಾರ ಹೇಳಿದೆ. ಆದರೆ, ಸರ್ಕಾರಿ ಕಾಲೇಜುಗಳಲ್ ನಿಗದಿತ ಪಠ್ಯಕ್ರಮ ಮುಗಿಯದ ಕಾರಣದಿಂದಲೂ ಎಲ್ಲ ವಿದ್ಯಾರ್ಥಿಗಳು ಒಟ್ಟಿಗೆ ಹಾಜರಾಗಿದ್ದಾರೆ.

‘ರಾಜ್ಯದಲ್ಲಿ 15 ಸಾವಿರ‌ ಅತಿಥಿ ಉಪನ್ಯಾಸಕರನ್ನು ಮತ್ತೆ ನಿಯೋಜನೆ ಮಾಡಿಕೊಳ್ಳದೆ ಪದವಿ ತರಗತಿಗಳನ್ನು ಆರಂಭಿಸಿರುವುದು ಸರಿಯಲ್ಲ. ವಿದ್ಯಾರ್ಥಿಗಳು ಇದ್ದರೂ ಉಪನ್ಯಾಸಕರೇ ಇರದ ಕಾರಣ ಪಾಠಗಳು ನಡೆಯುತ್ತಿಲ್ಲ’ ಎಂದು ಉಪನ್ಯಾಸಕರೊಬ್ಬರು ಹೇಳಿದರು.

‘ಕಾಯಂ ಉಪನ್ಯಾಸಕರ ಸಂಖ್ಯೆ ಕಡಿಮೆ‌ ಇದೆ. ಅನಿವಾರ್ಯವಾಗಿ ಹೆಚ್ಚು ವಿದ್ಯಾರ್ಥಿಗಳನ್ನು ಒಂದೇ ಕೊಠಡಿಯಲ್ಲಿ ಕೂರಿಸಿ ಪಾಠ ಮಾಡಬೇಕಾಗಿದೆ. ಅಂತರ ಕಾಪಾಡಿಕೊಳ್ಳಲೂ ಸಾಧ್ಯವಾಗುತ್ತಿಲ್ಲ’ ಎಂದರು.

ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಮುಂಜಾಗ್ರತೆ: ನಗರದ ಅನೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದೇಹದ ಉಷ್ಣಾಂಶ ಪರೀಕ್ಷಿಸಿ ಒಳಬಿಡಲಾಗುತ್ತಿದೆ. ಸ್ಯಾನಿಟೈಸ್ ವ್ಯವಸ್ಥೆ ಮಾಡಿದ್ದು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ಆನ್ ಲೈನ್ ತರಗತಿಗಳು ನಿಯಮಿತವಾಗಿ ನಡೆಯುತ್ತಿದ್ದು, ಆಫ್ ಲೈನ್ ತರಗತಿಗೆ ಹೆಚ್ಚು ವಿದ್ಯಾರ್ಥಿಗಳು ಬಂದಿಲ್ಲ.


ತರಗತಿಗೆ ಹಾಜರಾಗಿರುವ ವಿದ್ಯಾರ್ಥಿಗಳು

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು