ಸೋಮವಾರ, ಜನವರಿ 25, 2021
27 °C

ಬೇಗೂರು: ಸಂಚಾರ ಮಾರ್ಗ ಮಾರ್ಪಾಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯು ಥಣಿಸಂದ್ರ ಮುಖ್ಯರಸ್ತೆಯ ರೈಲ್ವೆ ಕೆಳಸೇತುವೆಯಿಂದ ಬೇಗೂರು ಜಂಕ್ಷನ್‌ವರೆಗೆ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಈ ಸಲುವಾಗಿ ಈ ಪ್ರದೇಶದ ಸಂಚಾರ ಮಾರ್ಗದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ.

ಕಾಮಗಾರಿ ನಿರ್ವಹಣೆ ವೇಳೆ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು ಎಂಬ ಕಾರಣಕ್ಕೆ ಈ ರಸ್ತೆಯ ಒಂದು ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಈ ಪರ್ಯಾಯ ವ್ಯವಸ್ಥೆ ಇದೇ 27ರಿಂದ 2021ರ ಜ.10ರವರೆಗೆ ಮುಂದುವರಿಯಲಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು