ಬುಧವಾರ, ಏಪ್ರಿಲ್ 14, 2021
31 °C
ಒಂದೇ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ಸೋಂಕಿತರ ಸಂಖ್ಯೆ 26ಕ್ಕೆ ಹೆಚ್ಚಳ

ಬೆಳ್ಳಂದೂರು: ಮತ್ತೆ ಆರು ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ಎಸ್‌ಜೆಆರ್‌ ವಾಟರ್‌ಮಾರ್ಕ್‌ ಅಪಾರ್ಟ್‌ಮೆಂಟ್‌ ಸಮುಚ್ಚಯದ ನಿವಾಸಿಗಳಲ್ಲಿ ಮತ್ತೆ ಆರು ಮಂದಿ ಕೋವಿಡ್‌ ಹೊಂದಿರುವುದು ಬುಧವಾರ ದೃಢಪಟ್ಟಿದೆ. ಇದರೊಂದಿಗೆ ಈ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ಕೋವಿಡ್‌ ಹೊಂದಿರುವವರ ಸಂಖ್ಯೆ 26ಕ್ಕೆ ಏರಿದೆ.

ಈ ಅಪಾರ್ಟ್‌ಮೆಂಟ್‌ ಸಮುಚ್ಚಯದ ನಿವಾಸಿಗಳಲ್ಲಿ ಫೆ.18ರಿಂದ 22ರವರೆಗೆ ಸೋಂಕಿನ ಲಕ್ಷಣಗಳಿದ್ದ 10 ಮಂದಿಯ ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಆ 10 ಮಂದಿಯೂ ಸೋಂಕು ಹೊಂದಿರುವುದು ದೃಢಪಟ್ಟಿತ್ತು. ಸೋಂಕು ಹರಡಿರುವ ಶಂಕೆಯಿಂದ ಇದೇ 22ರಂದು (ಸೋಮವಾರ) ಇಲ್ಲಿನ 501 ನಿವಾಸಿಗಳನ್ನು ಕೋವಿಡ್‌ ಪರೀಕ್ಷೆಗೊಳಪಡಿಸಿದಾಗ ಮತ್ತೆ 10 ಮಂದಿ ಸೋಂಕು ಹೊಂದಿರುವುದು ದೃಢಪಟ್ಟಿತ್ತು. ಹಾಗಾಗಿ ಇದೇ 23ರಂದು (ಮಂಗಳವಾರ) ಮತ್ತೆ 544 ಮಂದಿಯ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಅವರಲ್ಲಿ ಆರು ಮಂದಿ ಸೋಂಕು ಹೊಂದಿದ್ದಾರೆ. ಈ ಅಪಾರ್ಟ್‌ಮೆಂಟ್‌ ಸಮುಚ್ಚಯದ 85 ನಿವಾಸಿಗಳ ಮೂಗಿನ ದ್ರವದ ಮಾದರಿಗಳನ್ನು ಬುಧವಾರ ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಅಪಾರ್ಟ್‌ಮೆಂಟ್‌ ಸಮುಚ್ಚಯವನ್ನು ಕಂಟೈನ್‌ಮೆಂಟ್ ಪ್ರದೇಶ ಎಂದು ಗುರುತಿಸಿರುವ ಬಿಬಿಎಂಪಿ, ಇಲ್ಲಿನ ನಿವಾಸಿಗಳಿಂದ ಬೇರೆಯವರಿಗೆ ಸೋಂಕು ಹರಡದಂತೆ ತಡೆಯಲು ಬಿಗು ಕ್ರಮಗಳನ್ನು ಕೈಗೊಂಡಿದೆ.

ಅಂಕಿ ಅಂಶ

1,140

ಎಸ್‌ಜೆಆರ್‌ ಅಪಾರ್ಟ್‌ಮೆಂಟ್‌ ಸಮುಚ್ಚಯಲ್ಲಿ ಇದುವರೆಗೆ ಕೋವಿಡ್‌ ಪರೀಕ್ಷೆಗೆ ಒಳಪಟ್ಟವರು

1055

ಕೋವಿಡ್‌ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿರುವುದು

26

ಕೋವಿಡ್ ದೃಢಪಟ್ಟವರು

85

ಕೋವಿಡ್‌ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಬರಬೇಕಿರುವುದು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು