ಮಂಗಳವಾರ, ಮೇ 11, 2021
26 °C

ಬೆಂಗಳೂರು: ಔಷಧ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಾರ್ಮಿಕರ ದಿನದ ಅಂಗವಾಗಿ ಬೇಳೂರು ಸಹಾಯಹಸ್ತ ಟ್ರಸ್ಟ್‌ ವತಿಯಿಂದ ಕೋವಿಡ್ ರೋಗಿಗಳ ಮನೆ ಬಾಗಿಲಿಗೆ ಹಾಗೂ ಪೌರಕಾರ್ಮಿಕರಿಗೆ ಔಷಧ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.

‘ಮನೆಯಲ್ಲೇ ಚಿಕಿತ್ಸೆ ಪಡೆಯುವ ಕೋವಿಡ್ ರೋಗಿಗಳಿಗೆ ಉಚಿತವಾಗಿ ಔಷಧ ಕಿಟ್ ವಿತರಿಸಲಾಗುವುದು. ಇದಕ್ಕಾಗಿ ಸಹಾಯವಾಣಿ ಆರಂಭಿಸಿದ್ದೇವೆ’ ಎಂದು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದರು. 

‘ಸಹಾಯವಾಣಿಗೆ ಕರೆ ಮಾಡಿದ ಒಂದು ಗಂಟೆಯೊಳಗೆ ಪಾಲಿಕೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಕೊರೊನಾ ಪಾಸಿಟಿವ್ ಇರುವವರಿಗೆ ಮನೆ ಬಾಗಿಲಿಗೆ ಔಷಧ ಕಿಟ್ ವಿತರಿಸಲಾಗುವುದು. ಕಿಟ್‌ನಲ್ಲಿ 15 ದಿನಗಳಿಗೆ ಆಗುವಷ್ಟು ಔಷಧಗಳು ಇರಲಿವೆ’ ಎಂದೂ ಹೇಳಿದರು.

ಸಹಾಯವಾಣಿ ಸಂಖ್ಯೆ: 6360234388

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.