ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Namma Metro: ಈ ಭಾನುವಾರ ಬೇಗನೇ ಆರಂಭ, ಐಪಿಎಲ್‌ ವೀಕ್ಷಣೆಗಾಗಿ ಸೇವೆ ವಿಸ್ತರಣೆ

Published 23 ಮಾರ್ಚ್ 2024, 11:10 IST
Last Updated 23 ಮಾರ್ಚ್ 2024, 11:10 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಬಿಡದಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ‘ಬಿಡದಿ ಹಾಫ್ ಮ್ಯಾರಥಾನ್‌’ನಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲಕ್ಕಾಗಿ, ಮಾರ್ಚ್ 24ರಂದು (ಭಾನುವಾರ) ಬೆಳಿಗ್ಗೆ 7 ಗಂಟೆಯ ಬದಲು 4.30ರಿಂದಲೇ ಮೆಟ್ರೊ ರೈಲು ಸಂಚಾರವನ್ನು ಪ್ರಾರಂಭಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಹಸಿರು ಮತ್ತು ನೇರಳೆ ಮಾರ್ಗಗಳ ಎಲ್ಲ ನಾಲ್ಕು ಟರ್ಮಿನಲ್‌ಗಳಲ್ಲಿ ವಾರದ ದಿನಗಳಲ್ಲಿ ಬೆಳಿಗ್ಗೆ 5ಕ್ಕೆ ಮತ್ತು ಪ್ರತಿ ಬಾನುವಾರ ಬೆಳಿಗ್ಗೆ 7 ಗಂಟೆಗೆ ಮೆಟ್ರೊ ರೈಲು ಕಾರ್ಯಾಚರಣೆ ಆರಂಭವಾಗುತ್ತಿತ್ತು. ಈ ಭಾನುವಾರ 4.30ರಿಂದಲೇ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ; ಮೆಟ್ರೊ ಸೇವೆ ವಿಸ್ತರಣೆ

ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ಮಾರ್ಚ್ 25, ಮಾರ್ಚ್ 29 ಮತ್ತು ಏಪ್ರಿಲ್ 2ರಂದು ಎಲ್ಲ ನಾಲ್ಕು ಟರ್ಮಿನಲ್ ಮೆಟ್ರೊ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಈ ಪಂದ್ಯದ ದಿನಗಳಲ್ಲಿ ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಮಧ್ಯಾಹ್ನ 2.00 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ₹50ಕ್ಕೆ ಮಾರಾಟಕ್ಕೆ ಲಭ್ಯವಿರುತ್ತದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೊ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೊ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00ರಿಂದ ದಿನದ ಸೇವೆಗಳು ಕೊನೆಗೊಳ್ಳುವವರಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆ್ಯಪ್/ನಮ್ಮ ಮೆಟ್ರೊ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಕಬ್ಬನ್ ಪಾರ್ಕ್‌ ಮತ್ತು ಎಂ.ಜಿ ರೋಡ್ ಮೆಟ್ರೊ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT