ಬುಧವಾರ, ಆಗಸ್ಟ್ 12, 2020
26 °C

ಎಸಿಪಿ, ಇನ್‌ಸ್ಪೆಕ್ಟರ್‌ ಸೇರಿ 19 ಪೊಲೀಸರಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ 19 ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.

ಕಂಟೈನ್‌ಮೆಂಟ್ ಹಾಗೂ ಸೀಲ್‌ಡೌನ್ ಪ್ರದೇಶ, ಕೆ.ಆರ್‌.ಮಾರುಕಟ್ಟೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸಿದ್ದ ಪೊಲೀಸರಿಗೆ ಸಾಮೂಹಿಕವಾಗಿ ಕೊರೊನಾ ಪರೀಕ್ಷೆ ಮಾಡಿಸಲಾಗುತ್ತಿದೆ. 19 ಪೊಲೀಸರ ವರದಿಯೂ ಪಾಸಿಟಿವ್ ಬಂದಿದೆ.

ನಗರದ ಉಪವಿಭಾಗವೊಂದರ ಎಸಿಪಿ, ಇಬ್ಬರು ಇನ್‌ಸ್ಪೆಕ್ಟರ್, ಠಾಣೆಯೊಂದರ ಕಾನ್‌ಸ್ಟೆಬಲ್, ರಾಜ್ಯ ಅಪರಾಧ ದಾಖಲಾತಿ ವಿಭಾಗದ 6 ಪೊಲೀಸರು ಹಾಗೂ ಸಿಐಡಿಯ 9 ಸಿಬ್ಬಂದಿಗೆ ಸೋಂಕು ತಗುಲಿರುವುದು ಆರೋಗ್ಯ ಇಲಾಖೆ ವರದಿಯಿಂದ ಗೊತ್ತಾಗಿದೆ.

ಸಿಐಡಿ ವಿಶೇಷ ತನಿಖಾ ತಂಡದಲ್ಲಿದ್ದ ಪಿಎಸ್ಐಯೊಬ್ಬರಿಗೆ ಇತ್ತೀಚೆಗಷ್ಟೇ ಸೋಂಕು ತಗುಲಿತ್ತು. ಹೀಗಾಗಿ, ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಸಾಮೂಹಿಕವಾಗಿ ಪರೀಕ್ಷೆ ಮಾಡಿಸಲಾಗಿತ್ತು. ಅದರಲ್ಲಿ 9 ಮಂದಿ ವರದಿ ಪಾಸಿಟಿವ್ ಬಂದಿದೆ ಎಂದು ಗೊತ್ತಾಗಿದೆ.

ಬಹುಮಹಡಿ ಕಟ್ಟಡದಲ್ಲಿರುವ ಕಚೇರಿ ಸೀಲ್‌ಡೌನ್; ಬಹುಮಹಡಿ ಕಟ್ಟಡದ ಆರನೇ ಮಹಡಿಯಲ್ಲಿರುವ ಅಪರಾಧ ವರದಿ ದಾಖಲಾತಿ ವಿಭಾಗದ 6 ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ, ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು